25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

ಇಂದಬೆಟ್ಟು ಗ್ರಾಮ ಪಂಚಾಯತಿನ 2024-2025 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಇಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರಂಜಿತ್ ರವರು ನಡೆಸಿಕೊಟ್ಟರು.

ದೇವನಾರಿ ಶಾಲಾ ಮಕ್ಕಳು ನಾಡಗೀತೆ ಹಾಡಿದರು, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪ್ರೇಮಾ, ನಿಕಟಪೂರ್ವ ಅಧ್ಯಕ್ಷರಾದ ಅನಂದ ಅಡಿಲು, ಪಂಚಾಯತ್ ಸದಸ್ಯರಾದ ಪ್ರಮೋದ್ ಕುಮಾರ್, ಶ್ರೀಕಾಂತ್ ಎಸ್ ಇಂದಬೆಟ್ಟು, ವೀರಪ್ಪ ಮೊಯ್ಲಿ, ಸುಮಿತ್ರಾ, ಹರಿಣಾಕ್ಷಿ, ಸೌಮ್ಯ, ಜಯಂತಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಗ್ರಾಮದ ಅಭಿವೃದ್ಧಿಗಾಗಿ ಸಲಹೆ ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ರವರು ಜಮಾ ಖರ್ಚಿನ ವಿವರ ಮಂಡಿಸಿದರು. ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ಸ್ವಾಗತಿಸಿ ವರದಿ ಮಂಡಿಸಿದರು. ರಾಷ್ಟ್ರಗೀತೆ ಯೊಂದಿಗೆ ಗ್ರಾಮ ಸಭೆಯನ್ನು ಮುಕ್ತಾಯಗೊಂಡಿತ್ತು.

Related posts

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಚ್ಛತಾ ಆಂದೋಲನ ಶಿಬಿರ

Suddi Udaya

ಪ್ರೊ.ಎಸ್ ಪ್ರಭಾಕರ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Suddi Udaya

ಉಜಿರೆ: ಕೆಸರ್ ಡೊಂಜಿ ದಿನ ಕ್ರೀಡಾಕೂಟ

Suddi Udaya
error: Content is protected !!