37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

ಪುತ್ತೂರು: ಕೇಂದ್ರ ಸರಕಾರವು 100 ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡಿರುವ ವಿವಿಧ ಕಾರ್ಯಕ್ರಮಗಳ ಅಂಗವಾಗಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಆಗಸ್ಟ್ ಎರಡನೇ ವಾರದಲ್ಲಿ ವಿವಿಧ ವಾರ್ಷಿಕ ಹಾಗೂ ತೋಟಗಾರಿಕೆ ಬೆಳೆಗಳಲ್ಲಿ ಒಟ್ಟು 109 ಸುಧಾರಿತ, ಹವಾಮಾನ ಬದಲಾವಣೆಗೆ ಸ್ಪಂದಿಸುವ ಪೋಷಕಾಂಶ ಸಮೃದ್ಧ ತಳಿಗಳು ಬಿಡುಗಡೆಗೊಳ್ಳಲಿವೆ.

ಇದರಲ್ಲಿ ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನ ಕೇಂದ್ರದ ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳಾದ ನೇತ್ರಾ ಜಂಬೋ-1 ಮತ್ತು ನೇತ್ರಾ ಗಂಗಾ ಸೇರಿವೆ.

ನೇತ್ರಾ ಜಂಬೋ-1 ತಳಿಯನ್ನು ಈಗಿನ ನಿರ್ದೇಶಕ ಡಾ|| ದಿನಕರ ಅಡಿಗ ಮತ್ತವರ ತಂಡ ಅಭಿವೃದ್ಧಿಪಡಿಸಿದೆ. ಈ ತಳಿ ಕೂಲಿ ಖರ್ಚನ್ನು ಗಮನಾರ್ಹ ಪ್ರಮಾಣದಲ್ಲಿ ಉಳಿಸುತ್ತದೆ. ಇದರಲ್ಲಿ 12 ಗ್ರಾಂ ತೂಕದ ಬೀಜಗಳಿರುತ್ತವೆ. ಶೇ. 90ಕ್ಕೂ ಹೆಚ್ಚಿನ ಬೀಜಗಳದ್ದು 5 ಒಂದೇ ಗಾತ್ರ. ನೂರು ಕೆಜಿ ಬೀಜ

ಸಂಸ್ಕರಣೆಯಿಂದ 29ರಿಂದ 30 ಕೆಜಿ ತಿರುಳು ಸಿಗುತ್ತದೆ. ಈಗಿರುವ ರಫ್ತು ಗುಣಮಟ್ಟದ ಗ್ರೇಡ್ ಡಬ್ಲ್ಯೂ 180ಕ್ಕಿಂತ ಜಾಸ್ತಿ ಗ್ರೇಡ್ (ಡಬ್ಲ್ಯೂ130) ಈ ತಳಿಯ ತಿರುಳಿನದ್ದು.

ನೇತ್ರಾ ಗಂಗಾ ತಳಿಯನ್ನು ಹಿಂದಿನ ಪ್ರಭಾರ ನಿರ್ದೇಶಕ ಡಾ| ಗಂಗಾಧರ ನಾಯಕ್ ಮತ್ತವರ ತಂಡ ಅಭಿವೃದ್ಧಿಪಡಿಸಿದೆ. ಇದು ದೊಡ್ಡ ಗಾತ್ರದ ಬೀಜವನ್ನು (12 ರಿಂದ 13 ಗ್ರಾಂ), ಗೊಂಚಲುಗಳಲ್ಲಿ ಬಿಡುವ ತಳಿಯಾಗಿದ್ದು ಉತ್ತಮ ಫಸಲು ಕೊಡುತ್ತದೆ. ಪ್ರಾರಂಭದ ಒಂದೆರಡು ವರ್ಷಗಳಲ್ಲೇ ಹೂ ಬಿಡುವ ಹಾಗೂ ದೀರ್ಘಾವಧಿ (ಡಿಸೆಂಬರ್‌ನಿಂದ ಎಪ್ರಿಲ್ ತನಕ) ಹೂವು ಮತ್ತು ಗೇರು ಬೀಜ ಬಿಡುವ ತಳಿ. ತಿರುಳಿನ ಪ್ರಮಾಣ ಶೇ. 29.5 ಇರುತ್ತದೆ. ತಳಿಯು ಸವರುವಿಕೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುವುದರಿಂದ ಘನ ಸಾಂದ್ರ ಪದ್ಧತಿಯಲ್ಲಿ ಬೇಸಾಯಕ್ಕೆ ಯೋಗ್ಯ. ಮೂರನೆ ವರ್ಷದಲ್ಲೇ ಗಿಡವೊಂದಕ್ಕೆ ಕೆಜಿಗಿಂತ ಮೇಲ್ಪಟ್ಟು ಇಳುವರಿ ಕೊಡುತ್ತದೆ.

Related posts

ಶ್ರೀ ದುರ್ಗಾ ಫರ್ನಿಚರ್ ಮತ್ತು ಇಲೆಕ್ಟ್ರಾನಿಕ್ಸ್‌ನಲ್ಲಿ ಖರೀದಿಗೆ ವಿಶೇಷ ಡಿಸ್ಕೌಂಟ್

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya
error: Content is protected !!