ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ಆಶ್ರಯದಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಶ್ರೀಮದ್ ಭಾಗವತ ಪ್ರವಚನ ಸಪ್ತಾಹವು ಆ 9 ರಂದು ಪ್ರಾರಂಭಗೊಂಡು 15 ರವರೆಗೆ ಪ್ರತಿದಿನ ಸಂಜೆ ಗಂಟೆ 6.00 ರಿಂದ 8.00 ರವರೆಗೆ ನಡೆಯಲಿದೆ.
ದೀಪ ಪ್ರಜ್ವಲನೆಯನ್ನು ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಯು.ಶರತ್ ಕೃಷ್ಣ ಪಡ್ವೆಟ್ನಾಯ ನೇರವೇರಿಸಿ ಶುಭ ಕೋರಿದರು. ಶ್ರೀಮತ್ ಭಾಗವತ ಪ್ರವಚನ ಸಪ್ತಾಹದ ಪ್ರವಚನಕಾರವನ್ನು ವೀಣಾ ಬನ್ನಂಜೆ ನಿರ್ವಹಿಸಿದರು.
ವೇದಿಕೆಯಲ್ಲಿ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್, ಎಸ್.ಡಿ.ಎಂ ಎಜ್ಯುಕೇಶನ್ ಟ್ರಸ್ಟ್ ಇ.ಓ,ಐ.ಟಿ ಮತ್ತು ಆಡಳಿತಾಧಿಕಾರಿ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ ಉಪಸ್ಥಿತರಿದ್ದರು. ಚರಣ್ ಕುಮಾರ್ ಕುರ್ತೋಡಿ, ಶೈಲೇಶ್ ಕುಮಾರ್ ಕುತೋ೯ಡಿ , ಅಭಿನಂದನ್ ಹರೀಶ್ ಕುಮಾರ್ ಸಹಕರಿಸಿದರು.
ರೋಟರಿ ಕ್ಲಬ್ ಬೆಳ್ತಂಗಡಿ, ಪ್ರಗತಿ ಮಹಿಳಾ ಮಂಡಲ ಉಜಿರೆ,ತುಳು ಶಿವಳ್ಳಿ ಮಹಾಸಭಾ ಬೆಳ್ತಂಗಡಿ ತಾಲೂಕು,ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ,ಲಯನ್ಸ್ ಕ್ಲಬ್ ಬೆಳ್ತಂಗಡಿ, ಮುಗ್ಗ ಗುತ್ತು ಕುಟುಂಬಸ್ಥರ ಟ್ರಸ್ಟ್,ಜೆಸಿಐ ಬೆಳ್ತಂಗಡಿ ಮಂಜುಶ್ರೀ ಸಂಘ ಸಂಸ್ಥೆಯ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕರಿಸಿದರು.
ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ಸ್ವಾಗತಿಸಿದರು,ಪುತ್ತೂರು ವಿವೇಕಾನಂದ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಶ್ರೀಶ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಸುಧಾಮಣಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು..