ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕಲಿಕೆಯೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವುದರಿಂದ ಹೆಚ್ಚಿನ ಜ್ಞಾನಗಳಿಸಿಕೊಳ್ಳಲು ಸಾಧ್ಯವಿದೆ ಎಂದು ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿನ ಅರ್ಥಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ ಕುಲಮರ್ವ ಹೇಳಿದರು.

ಅವರು ವಾಣಿ ಪದವಿಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ರೂಢಿಸಿಕೊಳ್ಳಬೇಕು. ಕಠಿಣ ಪರಿಶ್ರಮದಿಂದ ಉತ್ತಮ ಪ್ರಯತ್ನವನ್ನು ಮಾಡಿದಾಗ ಜ್ಞಾನ ಗಳಿಸುವುದರೊಂದಿಗೆ ಉನ್ನತ ಸ್ಥಾನಮಾನವನ್ನು ಪಡೆಯಲು ಸಾಧ್ಯವಿದೆ. ವಯಸ್ಸಿನ ಮಿತಿಯಿಲ್ಲದೆ ಸ್ಕೌಟ್ ಗೈಡ್ಸ್ ಗೆ ಸೇರುವುದರಿಂದ ಉತ್ತಮ ಅವಕಾಶಗಳನ್ನು ಪಡೆಯಬಹುದು ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿ ಶಿಕ್ಷಣ ಸಂಸ್ಥೆಯಲ್ಲಿ ಬೇರೆಬೇರೆ ಸಂಘ-ಸಂಸ್ಥೆಗಳು ಕರ್ತವ್ಯ ನಿರ್ವಹಿಸುತ್ತಿದೆ .ಇದರ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿಗಳು ಪಡೆಯುವಂತಾಗಬೇಕು ಎಂದರು.


ಆರ್ ಎಸ್ ಎಲ್ ಬೆಳಿಯಪ್ಪ ಕೆ ಸ್ವಾಗತಿಸಿದರು. ಆರ್ ಎಲ್ ಶ್ರೀಮತಿ ರಕ್ಷಾ ವಂದಿಸಿದರು. ರೇಂಜರ್ ಸಿಂಚನಾ ಕಾರ್ಯಕ್ರಮ ನಿರೂಪಿಸಿದರು.

Leave a Comment

error: Content is protected !!