25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

ಬೆಳ್ತಂಗಡಿ : ಅಕ್ರಮವಾಗಿ ನದಿಗಳಿಂದ ಕಳ್ಳತನ ಮಾಡಿ ಮರಳು ಸಾಗಿಸುತ್ತಿದ್ದ ಲಾರಿಗಳಿಗೆ ಬೆಳ್ಳಂಬೆಳಗ್ಗೆ ಬೆಳ್ತಂಗಡಿ ತಹಶೀಲ್ದಾರ್ ತಂಡ ಕಾರ್ಯಾಚರಣೆ ನಡೆಸಿದ ಬಗ್ಗೆ ಆ.9 ರಂದು ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಿಂದ ಅಕ್ರಮವಾಗಿ ನದಿಗಳಿಂದ ಮರಳು ಕದ್ದು ತುಂಬಿಸಿಕೊಂಡು ಕಕ್ಕಿಂಜೆ ಕಡೆ ಸಾಗಾಟ ಮಾಡುತ್ತಿದ್ದ ಒಂದು ಲಾರಿ ಹಾಗೂ ಒಂದು ಟೆಂಪೋವನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ತಂಡ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡು ಧರ್ಮಸ್ಥಳ ಪೊಲೀಸರ ವಶಕ್ಕೆ ನೀಡಿದ್ದಾರೆ.

ಈ ಅಕ್ರಮ ಮರಳು ಸಾಗಾಟದ ಎರಡು ಲಾರಿಗಳ ಮತ್ತು ಮರಳಿನ ಬಗ್ಗೆ ಕ್ರಮ ಕೈಗೊಳ್ಳಲು ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಬೆಳ್ತಂಗಡಿ ತಹಶೀಲ್ದಾರ್ ವರದಿಯನ್ನು ಸಲ್ಲಿಸಲಾಗಿದೆ.

Related posts

ಸುರತ್ಕಲ್ ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಸಭಾಂಗಣದ ಲೋಕಾರ್ಪಣೆ

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya

ಬೆಳ್ತಂಗಡಿ:  ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಗಮ್ಮತ್ತ್’

Suddi Udaya

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya
error: Content is protected !!