24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಯಲ್ಲಿ ಶ್ರೀಧ. ಮಂ. ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನವನ್ನು ಪಡೆದಿರುತ್ತಾರೆ.

ಪ್ರೌಢಶಾಲಾ ವಿಭಾಗದಲ್ಲಿ ಒಂಬತ್ತನೇ ತರಗತಿಯ ಧೀಮಂತ್ ಹಾಗೂ ಆದರ್ಶ್ ಮತ್ತು ಹತ್ತನೇ ತರಗತಿಯ ನಿಹಾಲ್ ಇವರನ್ನೊಳಗೊಂಡ ಬಾಲಕರ ತಂಡ ಹಾಗೂ ಹತ್ತನೇ ತರಗತಿಯ ಸಮದ್ವಿತ, ಚರುಷ, ಸಮೀಕ್ಷಾ ಹಾಗೂ ಎಂಟನೇ ತರಗತಿಯ ಆದ್ಯ ರೈ ಇವರನ್ನು ಒಳಗೊಂಡ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆಯುವುದರ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತದೆ. ಇವರಲ್ಲಿ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಅತ್ಯುತ್ತಮ ಆಟಗಾರನಾಗಿ 9ನೇ ತರಗತಿಯ ಧೀಮಂತ್,
ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಅತ್ಯುತ್ತಮ ಆಟಗಾರ್ತಿಯಾಗಿ 10ನೇ ತರಗತಿಯ ಚರುಷ ಹೊರಹೊಮ್ಮಿದ್ದಾರೆ.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ಏಳನೇ ತರಗತಿಯ ಸಿದ್ಧಾಂತ ಜೈನ್, ಜೆಸ್ವಿತ್ ಮತ್ತು ಉಲ್ಲಾಸ್ ಇವರನ್ನು ಒಳಗೊಂಡ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಶ್ರಾವಣಿ, ಶ್ರೀಯಾ ಹಾಗೂ ವೃಷ್ಠಿ ಇವರನ್ನೊಳಗೊಂಡ ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸುವುದರ ಮೂಲಕ ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿರುತ್ತದೆ.


ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ಅತ್ಯುತ್ತಮ ಆಟಗಾರನಾಗಿ 7ನೇ ತರಗತಿಯ ಸಿದ್ದಾಂತ ಜೈನ್, ಪ್ರಾಥಮಿಕ ಶಾಲಾ ಬಾಲಕಿಯರ ವಿಭಾಗದಲ್ಲಿ ಅತ್ಯುತ್ತಮ ಆಟಗಾರ್ತಿಯಾಗಿ 7ನೇ ತರಗತಿಯ ಶ್ರಾವಣಿ ಹೊರಹೊಮ್ಮುವ ಮೂಲಕ ಸಮಗ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

Related posts

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ

Suddi Udaya

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ನೂತನ ಸದಸ್ಯರಿಗೆ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya
error: Content is protected !!