April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಯೋಗದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆ 2024 ನೇ ಸಾಲಿನ ನೈತಿಕ ಮೌಲ್ಯಧಾರಿತ ಪುಸ್ತಕಗಳ ಲೋಕಾರ್ಪಣೆ ಸಮಾರಂಭ ಹಾಗೂ 21 ನೇ ವರ್ಷದ ರಾಜ್ಯ ಮಟ್ಟದ ಅಂಚೆ- ಕುಂಚ ವಿಜೇತರಿಗೆ ಪುರಸ್ಕಾರ ಸಮಾರಂಭ ಕಾರ್ಯಕ್ರಮ ಆ.10ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ
ನಡೆಯಿತು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು.

ಕೃತಿ ಬಿಡುಗಡೆಯನ್ನು ಹಾವೇರಿ ಶ್ರೀ ಹುಕ್ಕೇರಿಮಠದ ಪರಮಪೂಜ್ಯ ಶ್ರೀಮನ್ ನಿರಂಜನ ಪ್ರಣವ ಸ್ವರೂಪಿ ಸದಾಶಿವ ಮಹಾಸ್ವಾಮಿಗಳು, ಬಿಡುಗಡೆಗೊಳಿಸಿದರು.

ಕನ್ನಡ ಚಲನಚಿತ್ರ ಸಂಗೀತ ನಿರ್ದೇಶಕ, ಗಾಯಕ ಅರ್ಜುನ್ ಜನ್ಯ ಪುರಸ್ಕಾರ ಮತ್ತು ಶುಭಾಶಂಸನೆ ಮಾಡಿದರು. ಅಭ್ಯಾಗತರಾಗಿ ಮಂಗಳೂರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ವೆಂಕಟೇಶ ಸುಬ್ರಾಯ ಪಟಗಾರ ಶಾಂತಿವನ, ಶಾಂತಿವನ ಟ್ರಸ್ಟ್ ನ ಟ್ರಸ್ಟಿ ಡಿ.ಹರ್ಷೇಂದ್ರ ಕುಮಾರ್, ಶಾಂತಿವನ ಟ್ರಸ್ ಕಾರ್ಯದರ್ಶಿ ಬಿ. ಸೀತಾರಾಮ ತೋಳ್ಪಾಡಿತ್ತಾಯ, ಶಾಂತಿವನ ಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕ ಡಾ.ಐ. ಶಶಿಕಾಂತ್ ಜೈನ್ ಉಪಸ್ಥಿತರಿದ್ದರು.

ರಾಷ್ಟ್ರೀಯ ಕಲಾವಿದೆ ಶಾಂತಯ್ಯ ಪರಡಿಮಠ ದಾವಣಗೆರೆ ಇವರಿಂದ ಕುಂಚ, ಗಾಯನ ಮತ್ತು ನೃತ್ಯ ಸನಾತನ ನಾಟ್ಯಾಲಯ ಮಂಗಳೂರು ಇವರಿಂದ ಪ್ರದರ್ಶನ
ಗೊಂಡಿತು.

ಡಾ.ಐ. ಶಶಿಕಾಂತ್ ಜೈನ್ ಸ್ವಾಗತಿಸಿದರು,ಕಾರ್ಕಳ ಶ್ರೀ ಭುವನೇಂದ್ರ ಪ್ರೌಢ ಶಾಲಾ ಶಿಕ್ಷಕ ಗಣೇಶ್ ಕಾರ್ಯಕ್ರಮ‌ ನಿರೂಪಿಸಿದರು.

Related posts

ಅ.11: ಗುರುವಾಯನಕೆರೆಯಲ್ಲಿ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಗುರುವಾಯನಕೆರೆ ಹುತಾತ್ಮ ಯೋಧ ಏಕನಾಥ್ ಶೆಟ್ಟಿ ರವರ ಪ್ರತಿಮೆಗೆ ಮಾಲಾರ್ಪಣೆ, ನುಡಿನಮನ

Suddi Udaya

ಡಿ. 23-24: ಗುರುವಾಯನಕೆರೆ ಎಕ್ಸೆಲ್ ಪಿ ಯು ಕಾಲೇಜಿನಲ್ಲಿ “ಎಕ್ಸೆಲ್ ಪರ್ಬ”

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!