ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ ಹಾಗೂ ಸಿಬ್ಬಂದಿ ವರ್ಗದವರಿಗಾಗಿ ಕೆಸರು ಗದ್ದೆ ಕ್ರೀಡಾಕೂಟವನ್ನು ಉಜಿರೆಯ ಪೆರ್ಲ ಶ್ರೀ ಲಕ್ಷ್ಮಿ ಜನಾರ್ದನ ದೇವಸ್ಥಾನದ ಬಳಿಯ ಗದ್ದೆಯಲ್ಲಿ ಆಗಸ್ಟ್ 8 ರಂದು ಆಯೋಜಿಸಿಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮ ಸಂಯೋಜಿಸಿದ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಡಾ. ರವೀಶ್ ಪಡುಮಲೆ ರವರು ತುಳುನಾಡ ನೆಲದ ಸಂಸ್ಕೃತಿ, ಆಚಾರ- ವಿಚಾರ, ಮತ್ತು ಗ್ರಾಮೀಣ ಕ್ರೀಡಾಕೂಟಗಳನ್ನು ನೆರೆದಿದ್ದವರಿಗೆ ಸಂಕ್ಷಿಪ್ತವಾಗಿ ಪರಿಚಯಿಸಿದರು.
ಸುಮಾರು 250 ಅಧಿಕ ವಿದ್ಯಾರ್ಥಿಗಳು ಸಾಂಪ್ರದಾಯಿಕ ಆಟಗಳನ್ನು ಆಡುವುದರೊಂದಿಗೆ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಸಂಭ್ರಮಿಸಿದರು. ಕ್ರೀಡಾಕೂಟಕ್ಕೆ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್, ಧರ್ಮೇಂದ್ರ ಕುಮಾರ್, ನಿತಿನ್, ಚರಣ್ ಸಹಕರಿಸಿದರು. ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ರವರು ಮತ್ತು ಉಪನ್ಯಾಸಕ ವರ್ಗದವರು ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.