25.7 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿಯವರನ್ನು ದಿನಾಂಕ 09.08.2024ರಂದು ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಹಾರೈಸಿ ಶ್ರೀಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ ಪ್ರಸಾದವನ್ನು ನೀಡಿ ದೇಶಕ್ಕೆ ಇನ್ನು ಉತ್ತಮ ಸೇವೆ ಸಲ್ಲಿಸುವಂತಾಗಲಿ ಎಂದು ಆಶೀರ್ವದಿಸಿದರು. ನಂತರ ಅನೇಕ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.

ರಾಜ್ಯಸಭಾ ಸಂಸದರ ವ್ಯಾಪ್ತಿಗೆ ಬರುವ ನಿಧಿಯನ್ನು ಪೂಜ್ಯರು ಬೀದರ್‌ನಲ್ಲಿ ವಿನೂತನವಾಗಿ ವಿನಿಯೋಗಿಸಿ ಒಂದು ಕ್ಷೀರಕ್ರಾಂತಿಗೆ ನಾಂದಿ ಹಾಡಿರುವ ಬಗ್ಗೆ ಪ್ರಧಾನಮಂತ್ರಿಯವರಿಗೆ ವಿವರಿಸಿದರು. ಇದು ಒಂದು ಮಾದರಿ ಸಂಸದರ ನಿಧಿಯ ಸದ್ವಿನಿಯೋಗ ಎಂದು ಪ್ರಧಾನಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಹಾಗೆಯೇ ರಾಜ್ಯದಾದ್ಯಂತ ಗ್ರಾಮಾಭಿವೃದ್ಧಿ ಯೋಜನೆಯಿಂದ ನಿರ್ವಹಿಸಲ್ಪಡುತ್ತಿರುವ 10 ಸಾವಿರ ಸಿ.ಎಸ್.ಸಿ. ಕೇಂದ್ರಗಳ ಮೂಲಕ ಕೇಂದ್ರ ಸರಕಾರದ ಹಾಗೂ ಸಿ.ಎಸ್.ಸಿ.ಯ ಪ್ರಮುಖ ಸೇವೆಗಳನ್ನು ಗ್ರಾಮೀಣ ಜನತೆಯ ಮನೆ ಬಾಗಿಲಿಗೆ ತಲುಪಿಸುತ್ತಿರುವ ಬಗ್ಗೆ ಶ್ರೀ ಹೆಗ್ಗಡೆಯವರು ವಿವರಿಸಿದರು. ಇಲ್ಲಿಯವರೆಗೆ ಸುಮಾರು 3 ಕೋಟಿ ಸಿ.ಎಸ್.ಸಿ. ಸೇವೆಗಳು ಯೋಜನೆಯ ಮೂಲಕ ಜನಸಾಮಾನ್ಯರಿಗೆ ತಲುಪಿರುವ ಬಗ್ಗೆ ಪ್ರಧಾನಮಂತ್ರಿಗಳು ಅಚ್ಚರಿ ವ್ಯಕ್ತಪಡಿಸಿದರು. ಶ್ರೀ ಹೆಗ್ಗಡೆಯವರ ಈ ಎಲ್ಲಾ ಸೇವೆಗಳ ಚಿಂತನೆಯು ದೇಶಕ್ಕೆ ಮಾದರಿಯಾಗಲಿ ಎಂದು ಪ್ರಧಾನಮಂತ್ರಿಗಳು ಶ್ಲಾಘಿಸಿದರು.

ಬೀದರ್‌ನಲ್ಲಿ ಕ್ಷೀರಕ್ರಾಂತಿ : ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ತಮ್ಮ ಸಂಸದರ ನಿಧಿಯಿಂದ ಉತ್ತರ ಕರ್ನಾಟಕದ ಹಿಂದುಳಿದ ಜಿಲ್ಲೆಯಾದ ಬೀದರ್‌ನಲ್ಲಿ ಒಂದು ಕ್ಷೀರಕ್ರಾಂತಿಯನ್ನೇ ಮಾಡುವ ಯೋಜನೆ ಹಾಕಿಕೊಂಡು ಕೆ.ಎಂ.ಎಫ್. ಸಹಯೋಗದೊಂದಿಗೆ ಆನೇಕ ಹಾಲು ಒಕ್ಕೂಟಗಳನ್ನು ಅಭಿವೃದ್ಧಿಪಡಿಸಿ ಹೈನುಗಾರಿಕೆ ಮಾಡಲು ಅನೇಕ ಪ್ರೋತ್ಸಾಹಗಳನ್ನು ನೀಡಿದ್ದಾರೆ.

ಸಂಸದರ ನಿಧಿಯಿಂದ ಹಾಲು ಸಂಗ್ರಹಣಾ ಕಟ್ಟಡಗಳನ್ನು ನಿರ್ಮಿಸಿದ್ದಲ್ಲದೆ. ಹಾಲು ಸಂಗ್ರಹವನ್ನು ಹೆಚ್ಚಿಸಿಕೊಳ್ಳಲು ಅತ್ಯಾಧುನಿಕ ಯಂತ್ರಗಳಾದ ಆಟೋಮ್ಯಾಟಿಕ್ ಮಿಲ್ಕ್ ಕಲೆಕ್ಸಿಂಗ್ ಯುನಿಟ್(ಎ.ಎಂ.ಸಿ.ಯು.), ಸ್ಟೈನ್‌ಲೆಸ್ ಸೀಲ್ ಕಾನ್, ಪಾಟೋಮಾಟಿಕ್ ಯಂತ, ಹಾಲು ತೂಕದ ಯಂತಗಳನ್ನು ಒದಗಿಸಿರುತಾರೆ. ಯೋಜನೆಯ ಕೃಷಿ ಅಧಿಕಾರಿಗಳನ್ನು ನಿಯೋಜಿಸಿ ಗ್ರಾಮೀಣ ರೈತರರಿಗೆ ಹೈನುಗಾರಿಕೆಯ ಬಗ್ಗೆ ಸೂಕ್ತ ತರಬೇತಿಯನ್ನು ನೀಡಿದ್ದಾರೆ. ಈ ಯೋಜನೆ ಪ್ರಾರಂಭವಾಗುವುದಕ್ಕಿಂತ ಮುಂಚೆ ಜಿಲ್ಲೆಯಲ್ಲಿ ಹಾಲು ಉತ್ಪಾದನೆ ಪ್ರತಿನಿತ್ಯ 18 ಸಾವಿರ ಲೀಟರ್ ಮಾತ್ರ ಇತ್ತು. ಇದು ಯೋಜನೆಯಿಂದಾಗಿ ಪ್ರತಿ ದಿನ ಗರಿಷ್ಠ 60 ಸಾವಿರ ಲೀಟರ್ಗೆ ಏರಿಕೆ ಕಂಡಿದ್ದು ಕೆಲವೇ ತಿಂಗಳುಗಳಲ್ಲಿ ಪ್ರತಿನಿತ್ಯ 1 ಲಕ್ಷ ಲೀಟರ್ ಹಾಲು ಸಂಗ್ರಹದ ಗುರಿಯನ್ನು ತಲುಪಲಿದ್ದು ಇದೊಂದು ಐತಿಹಾಸಿಕ ಉತ್ಪಾದನೆಯಾಗಿರುತ್ತದೆ. ಸಂಸದರ ನಿಧಿಯ ಬಳಕೆಗೆ ಇದು ಒಂದು ಉತ್ತಮ ಮಾದರಿ ಎಂದು ಪ್ರಧಾನಮಂತ್ರಿಗಳು ಶ್ಲಾಘಿಸಿದರು.

ಆಯುಷ್ಮಾನ್ ಸೇವೆಗೂ ಮೆಚ್ಚುಗೆ : ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಮುನ್ನಡೆಸುತ್ತಿರುವ ಗ್ರಾಮಾಭಿವೃದ್ಧಿ

ಯೋಜನೆಯೊಂದಿಗೆ ಕೇಂದ್ರ ಸರಕಾರದ ತಂತ್ರಜ್ಞಾನ ಮತ್ತು ಮಾಹಿತಿ ವಿದ್ಯುನ್ಮಾನ ಸಚಿವಾಲಯದ ಮಹತ್ವದ ಕಾರ್ಯಕ್ರಮವಾದ ಸಿ.ಎಸ್.ಸಿ. ಸೇವೆಗಳನ್ನು ಜನ ಸಾಮಾನ್ಯರಿಗೆ ನೀಡುವ ಒಂದು ಪಾಲುದಾರಿಕಾ ಒಪ್ಪಂದವಾಗಿರುತ್ತದೆ. ರಾಜ್ಯಾದ್ಯಾಂತ ಯೋಜನೆಯು 10 ಸಾವಿರ ಗ್ರಾಹಕ ಸೇವಾಕೇಂದ್ರಗಳ ಮೂಲಕ ಸಿ.ಎಸ್.ಸಿ. ಸೇವೆಯನ್ನು ಯಶಸ್ವಿಯಾಗಿ ಜನಸಾಮಾನ್ಯರಿಗೆ ಯೋಜನೆಯಿಂದ ನೀಡಲಾಗುತ್ತಿದೆ. ‘ಆಯುಷ್ಮಾನ್ ಭಾರತ್’ ಸರಕಾರದ ಮಹತ್ವದ ಆರೋಗ್ಯ ವಿಮೆಯಾಗಿದ್ದು ಅರ್ಹ ಫಲಾನುಭವಿಗಳಿಗೆ ಇದನ್ನು ಉಚಿತವಾಗಿ ಸಿ.ಎಸ್.ಸಿ. ಕೇಂದ್ರಗಳ ಮೂಲಕ ವಿತರಿಸಿದ್ದು ಇಲ್ಲಿಯವರೆಗೆ 1.40 ಕೋಟಿಗೂ ಅಧಿಕ ಜನರು ‘ಆಯುಷ್ಮಾನ್ ವಿಮೆ’ಗೆ ನೋಂದಾಯಿಸಿಕೊಂಡಿದ್ದಾರೆ. ಗ್ರಾಮೀಣ ಮಟ್ಟದಲ್ಲಿ ಜನರಿಗೆ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸೇವೆ ನೀಡುವ ಬಗ್ಗೆಯೂ ಪ್ರಧಾನಮಂತ್ರಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

Related posts

ಬುರುಡೆ ಚಿನ್ನಯ್ಯನನ್ನು ಬೆಂಗಳೂರಿನಿಂದ ಬೆಳ್ತಂಗಡಿ ಕರೆತಂದ ಎಸ್.ಐ.ಟಿ

Suddi Udaya

ಮಿತ್ತಬಾಗಿಲು ಸುಜ್ಞಾನ ಸಂಜೀವಿನಿ ಒಕ್ಕೂಟದ ಮಹಾಸಭೆ

Suddi Udaya

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya
error: Content is protected !!