29.6 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಪ್ರಮುಖ ಸುದ್ದಿರಾಜ್ಯ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಪತ್ರಿಕಾಲಯಗಳಲ್ಲಿ ತರಬೇತಿಗೆಅರ್ಜಿ ಆಹ್ವಾನ: 20 ಸಾವಿರ ಶಿಷ್ಯವೇತನ

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿನಿಯರಿಗೆ ಮಾಸಿಕ 20 ಸಾವಿರ ರೂ. ಶಿಷ್ಯವೇತನದೊಂದಿಗೆ ಪ್ರತಿಷ್ಠಿತ ಪತ್ರಿಕೆಗಳಲ್ಲಿ ತರಬೇತಿ ಕೊಡಿಸಲು ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ/ ಪದವಿ ಮುಗಿಸಿ ಹೊರ ಬರುವ ವಿದ್ಯಾರ್ಥಿನಿಯರಿಗೆ ಪತ್ರಕರ್ತೆಯರಾಗುವಂತೆ ಸಜ್ಜುಗೊಳಿಸುವುದು ಅಕಾಡೆಮಿಯ ಉದ್ದೇಶ.
ಪ್ರಸಕ್ತ ಸಾಲಿನಲ್ಲಿ ಐವರು ವಿದ್ಯಾರ್ಥಿನಿಯರಿಗೆ ಪ್ರಮುಖ ದಿನಪತ್ರಿಕೆಗಳಲ್ಲಿ 2 ತಿಂಗಳ ಕಾಲ ತರಬೇತಿ ಪಡೆಯಲು ಮಾಸಿಕ 2೦ ಸಾವಿರ ರೂ. ಶಿಷ್ಯವೇತನ ನೀಡಲಾಗುತ್ತದೆ. ಕರ್ನಾಟಕದ ಯಾವುದೇ ಪತ್ರಿಕೋದ್ಯಮ ವಿಷಯದಲ್ಲಿ ” ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವವರಿಗೆ ಆದ್ಯತೆ ನೀಡಲಾಗುವುದು. ವಿದ್ಯಾರ್ಥಿನಿಯರು ಆ.26ರೊಳಗೆ ತಮ್ಮ ಸ್ವವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಫೋಟೊ ಪ್ರತಿಯನ್ನು ಸ್ಕ್ಯಾನ್ ಮಾಡಿ karnatakame- [email protected]ಗೆ ಇ-ಮೇಲ್ ಮೂಲಕ ಕಳುಹಿಸಬೇಕು.
28 ವರ್ಷದೊಳಗಿನವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಗೆ ಅಕಾಡೆಮಿಯು ಅರ್ಹತಾ ಪರೀಕ್ಷೆ ನಡೆಸಲಿದೆ ಎಂದು ಕರ್ನಾಟಕ ಮಾಧ್ಯಮ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya
error: Content is protected !!