ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮವು ಆ.10 ರಂದು ನಿಡ್ಲೆ-ಧರ್ಮಸ್ಥಳದ ಹೋಟೆಲ್ ಆದಿತ್ಯ ವ್ಯೂ ನಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಭಾರತೀಯ ಸಂಘಟನಾ ಕಾರ್ಯದರ್ಶಿ ಬಿ. ಸುರೇಂದ್ರನ್ ನೆರವೇರಿಸಿದರು. ಭಾರತೀಯ ಮಜ್ದೂರ್ ಸಂಘದ ರಾಜ್ಯ ಅಧ್ಯಕ್ಷ ಎನ್.ಕೆ. ಪ್ರಕಾಶ್ ಅಧ್ಯಕ್ಷತೆ ವಹಿಸಿದ್ದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಲ್ ವಿಶ್ವನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ದುರೈರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸ್ವಸ್ತಿಕ್ ಪ್ರಾರ್ಥಿಸಿ, ದ.ಕ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಯು ಸ್ವಾಗತಿಸಿ, ಭಾರತೀಯ ಮಜ್ದೂರ್ ಸಂಘದ ಜಯರಾಜ್ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿ, ಜಿಲ್ಲಾ ಕಾರ್ಯದರ್ಶಿ ಕುಮಾರನಾಥ ಧನ್ಯವಾದವಿತ್ತರು.