ಉಜಿರೆ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಆ.10 ರಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಶಾಲೆಯ ಮೂಲೆ ಮೂಲೆಯಲ್ಲೂ ತುಳುನಾಡಿಗೆ ಸಂಬಂಧಪಟ್ಟಂತ ವಿವಿಧ ಭಕ್ಷ ಭೋಜ್ಯ, ಆಟಿಯಲ್ಲಿ ಆಡುವಂತಹ ವಿಶೇಷ ಆಟಗಳು ರಾರಾಜಿಸಿದವು.
ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕ ಡಾ.ದಿವಾ ಕೊಕ್ಕಡ ಕಾರ್ಯಕ್ರಮವನ್ನು ಆಟಿ ಕಳೆಂಜನನ್ನು ಗೌರವಿಸುವ ಮೂಲಕ ಉದ್ಘಾಟಿಸಿ, ಮಾತನಾಡಿದ ಅವರು ತುಳುನಾಡಿನ ಕಲೆ, ಸಂಸ್ಕೃತಿ, ಸಂಸ್ಕಾರ, ಆಚಾರ-ವಿಚಾರ, ಆಹಾರ, ಆರೋಗ್ಯವನ್ನು
ಆಟಿ ದಿನಗಳಲ್ಲಿ ಹೇಗೆ ಕಾಯ್ದುಕೊಳ್ಳಬೇಕು ಎಂಬ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತುಳುವಿನಲ್ಲಿ ತಿಳಿಯಪಡಿಸಿದರು.
ವಿದ್ಯಾರ್ಥಿಗಳಿಂದ ತುಳು ನಾಡಿಗೆ ಹಾಗೂ ತುಳು ಭಾಷೆಗೆ ಸಂಬಂಧಪಟ್ಟಂತಹ ಹಾಡು, ಗಾದೆ, ಸಂಧಿ ಪಾಡ್ದನ, ನೃತ್ಯ, ಭಿತ್ತಿ ಪತ್ರಿಕೆ, ಆಟಿ ತಿಂಗಳಿನ ತಿನಿಸುಗಳ ಪ್ರದರ್ಶನವನ್ನು ಹಾಗೂ ದೇಸಿ ಆಟಗಳನ್ನು ಸಹ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಉಜಿರೆ ರತ್ನಮಾನಸ ಛಾತ್ರಾವಾಸದ ನಿಲಯ ಪಾಲಕರಾದ ಶ್ರೀಯುತ ಯತೀಶ್ ಇವರು ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯ ಶ್ರೀ ಮನ್ಮೋಹನ್ ನಾಯಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಶಿಕ್ಷಕ ಕಿರಣ್ ರಾಜ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಶ್ರೀ ಕಲಾ ಕೇಂದ್ರದ ರಂಗ ನಿರ್ದೇಶಕರಾದ ಯಶವಂತ್ ಬೆಳ್ತಂಗಡಿಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ಶಿಕ್ಷಕಿ ಗೀತಾ ವಂದಿಸಿದರು.