April 2, 2025
ಗ್ರಾಮಾಂತರ ಸುದ್ದಿ

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಬೆಳ್ತಂಗಡಿ: ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿನ್ನು ನಾಳೆಯಿಂದ ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಆರಂಭಿಸಲಿರುವ ಹಿನ್ನೆಲೆಯಲ್ಲಿ ಆ.11 ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಅವರು ಚಾಲನೆ ನೀಡಿದರು.

ಪುಂಜಾಲಕಟ್ಟೆ – ಚಾಮಾ೯ಡಿ ಹೆದ್ದಾರಿ ಕಾಮಗಾರಿಯನ್ನು ಡಿ.ಪಿ ಜೈನ್ ವಹಿಸಿಕೊಂಡಿದ್ದು, ಒಂದು ವಷ೯ದ ಹಿಂದೆ ಅವರು ಕಾಮಗಾರಿ ಆರಂಭಿಸಿದ್ದರು. ಆದರೆ
ಜಿಲ್ಲೆಯ ಹವಾಮಾನದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಕಾಮಗಾರಿ ಮಾಡುವಲ್ಲಿ ಸಮಸ್ಯೆಯಾಗಿ ಬೆಳ್ತಂಗಡಿ ತಾಲೂಕಿನ ಜನರು ಸಂಕಷ್ಟ ಎದುರಿಸುವಂತಾಗಿತ್ತು.
ಇದಕ್ಕಾಗಿ ಗುತ್ತಿಗೆದಾರ ಡಿ.ಪಿ ಜೈನ್, ಹೆದ್ದಾರಿ ಮುಖ್ಯ

ಇಂಜಿನಿಯರ್ ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಮುಂದಿನ ಹೆದ್ದಾರಿ ಕಾಮಗಾರಿಯನ್ನು ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಮಾಡುವುದಾಗಿ ನಿಧಾ೯ರಿಸಲಾಗಿದೆ. ಇದಕ್ಕೆ ಗುತ್ತಿಗೆದಾರ ಡಿ.ಪಿ.ಜೈನ್ ಒಪ್ಪಿಗೆ ನೀಡಿದ್ದು, ನಾಳೆಯಿಂದ ಕಾಮಗಾರಿ ಆರಂಭಗೊಳ್ಳಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮೋಗೇರೋಡಿ ಕನ್ಸ್ಟ್ರಕ್ಷನ್ ನವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

Suddi Udaya

ನಡ ಸರಕಾರಿ ಪ್ರೌಢಶಾಲೆಗೆ ಕ್ರೀಡಾ ಸಮವಸ್ತ್ರ ಕೊಡುಗೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಪ್ರೇರಣಾ ತರಗತಿ

Suddi Udaya
error: Content is protected !!