ಗ್ರಾಮಾಂತರ ಸುದ್ದಿ

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಬೆಳ್ತಂಗಡಿ: ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿನ್ನು ನಾಳೆಯಿಂದ ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಆರಂಭಿಸಲಿರುವ ಹಿನ್ನೆಲೆಯಲ್ಲಿ ಆ.11 ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಅವರು ಚಾಲನೆ ನೀಡಿದರು.

ಪುಂಜಾಲಕಟ್ಟೆ – ಚಾಮಾ೯ಡಿ ಹೆದ್ದಾರಿ ಕಾಮಗಾರಿಯನ್ನು ಡಿ.ಪಿ ಜೈನ್ ವಹಿಸಿಕೊಂಡಿದ್ದು, ಒಂದು ವಷ೯ದ ಹಿಂದೆ ಅವರು ಕಾಮಗಾರಿ ಆರಂಭಿಸಿದ್ದರು. ಆದರೆ
ಜಿಲ್ಲೆಯ ಹವಾಮಾನದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಕಾಮಗಾರಿ ಮಾಡುವಲ್ಲಿ ಸಮಸ್ಯೆಯಾಗಿ ಬೆಳ್ತಂಗಡಿ ತಾಲೂಕಿನ ಜನರು ಸಂಕಷ್ಟ ಎದುರಿಸುವಂತಾಗಿತ್ತು.
ಇದಕ್ಕಾಗಿ ಗುತ್ತಿಗೆದಾರ ಡಿ.ಪಿ ಜೈನ್, ಹೆದ್ದಾರಿ ಮುಖ್ಯ

ಇಂಜಿನಿಯರ್ ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಮುಂದಿನ ಹೆದ್ದಾರಿ ಕಾಮಗಾರಿಯನ್ನು ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಮಾಡುವುದಾಗಿ ನಿಧಾ೯ರಿಸಲಾಗಿದೆ. ಇದಕ್ಕೆ ಗುತ್ತಿಗೆದಾರ ಡಿ.ಪಿ.ಜೈನ್ ಒಪ್ಪಿಗೆ ನೀಡಿದ್ದು, ನಾಳೆಯಿಂದ ಕಾಮಗಾರಿ ಆರಂಭಗೊಳ್ಳಲಿದೆ.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮೋಗೇರೋಡಿ ಕನ್ಸ್ಟ್ರಕ್ಷನ್ ನವರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಚುನಾವಣೆ : ಸಿ.ಆರ್ . ಪಿ.ಎಫ್ ಯೋಧರು ಹಾಗೂ ಪೊಲೀಸರಿಂದ ಕೊಕ್ಕಡ, ಮಡಂತ್ಯಾರು, ಪುಂಜಾಲಕಟ್ಟೆ, ಬಸವನಗುಡಿಗಳಲ್ಲಿ ಪಥಸಂಚಲನ

Suddi Udaya

ನೆರಿಯ : ಪೆಟ್ರೋನೆಟ್ ಪೈಪ್ ಲೈನ್ ನಿಂದ ಪೆಟ್ರೋಲ್ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಉಜಿರೆಯಲ್ಲಿ ಬ್ಯೂಟಿ ಬ್ಲಂಡ್ ಸಲೂನ್ ಶುಭಾರಂಭ

Suddi Udaya

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ: ಸಾಧಕ ನವಜೀವನ ಸದಸ್ಯರಿಗೆ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya
error: Content is protected !!