July 23, 2026
ತಾಲೂಕು ಸುದ್ದಿ

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

ಬೆಳ್ತಂಗಡಿ: ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಸಾವ೯ಜನಿಕರಿಗೆ ಬಹಳಷ್ಟು ಸಮಸ್ಯೆಯಾಗಿರುವ ವಿಷಯ ಗಮನಕ್ಕೆ ಬಂದಿದ್ದು, ಇದನ್ನು ನಿವಾರಿಸುವ ನಿಟ್ಟಿನಲ್ಲಿ ಈ ರಸ್ತೆಯ ಮುಂದಿನ ಕಾಮಗಾರಿಯನ್ನು ಗುತ್ತಿಗೆದಾರ ಮೊಗೇರೋಡಿ ಕನ್ಟ್ರಕ್ಷನ್ ನವರು ಆ.12 ನಾಳೆಯಿಂದ
ಮಾಡಲಿದ್ದಾರೆ ಎಂದು ಸಂಸದ ಬ್ರಿಜೇಶ್ ಚೌಟ ಹೇಳಿದರು.

ಅವರು ಆ.11ರಂದು ಬೆಳ್ತಂಗಡಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೆದ್ದಾರಿ ಅಭಿವೃದ್ಧಿಯಲ್ಲಿ ದೊಡ್ಡ ಸಾಧನೆ ಮಾಡಲಾಗಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಅವರ ಅವಧಿಯಲ್ಲಿ ಮಂಜೂರಾದ ಹೆದ್ದಾರಿ ಕಾಮಗಾರಿಗಳನ್ನು ಪೂರ್ಣಗೊಳಿಸುದು ನನ್ನ ಆದ್ಯತೆಯಾಗಿದೆ ಎಂದು ತಿಳಿಸಿದರು.
ಪುಂಜಾಲಕಟ್ಟೆ – ಚಾಮಾ೯ಡಿ ಹೆದ್ದಾರಿ ಕಾಮಗಾರಿಯನ್ನು ಡಿ.ಪಿ ಜೈನ್ ವಹಿಸಿಕೊಂಡಿದ್ದು, ಹೆದ್ದಾರಿ ಕಾಮಗಾರಿಗೆ ಹಣ ಬಿಡುಗಡೆ ಆಗಿದೆ.ಆದರೆ ಜಿಲ್ಲೆಯ ಹವಾಮಾನದ ಬಗ್ಗೆ ಸರಿಯಾದ ಮಾಹಿತಿ ಇಲ್ಲದೆ ಕಾಮಗಾರಿ ಮಾಡುವಲ್ಲಿ ಸಮಸ್ಯೆಯಾಗಿ ಬೆಳ್ತಂಗಡಿ ತಾಲೂಕಿನ ಜನರು ಸಂಕಷ್ಟ ಎದುರಾಗಿದೆ.
ಜನರಿಗೆ ಆಗಿರುವ ಸಮಸ್ಯೆ ನಿವಾರಣೆಗೆ ಶಾಸಕ ಹರೀಶ್ ಪೂಂಜ ಹಾಗೂ ನಾನು ಗುತ್ತಿಗೆದಾರ ಮೂಲಕ ಪ್ರಯತ್ನ ಮಾಡಿದರೂ,
ಸಫಲವಾಗಲಿಲ್ಲ. ಇದಕ್ಕಾಗಿ ಗುತ್ತಿಗೆದಾರ ಡಿ.ಪಿ ಜೈನ್, ಹೆದ್ದಾರಿ ಮುಖ್ಯ ಇಂಜಿನಿಯರ್ ಹಾಗೂ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಮುಂದಿನ ಹೆದ್ದಾರಿ ಕಾಮಗಾರಿಯನ್ನು ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಮಾಡುವುದಾಗಿ ನಿಧಾ೯ರಿಸಲಾಗಿದೆ. ಇದಕ್ಕೆ ಗುತ್ತಿಗೆದಾರ ಡಿ.ಪಿ.ಜೈನ್ ಒಪ್ಪಿಗೆ ನೀಡಿದ್ದಾರೆ ಎಂದು ವಿವರಿಸಿದರು.
ಪ್ರಥಮ ಹಂತದಲ್ಲಿ ಪುಂಜಾಲಕಟ್ಟೆಯಿಂದ ಚಾಮಾ೯ಡಿ ತನಕ ರಸ್ತೆಯ ಹೊಂಡ -ಗುಂಡಿಗಳನ್ನು ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗುವುದು. ಈ ಕಾಮಗಾರಿಯನ್ನು ನಾಳೆಯಿಂದ ಆರಂಭಿಸಲಾಗುವುದು ಎಂದು ತಿಳಿಸಿದರು.
ಶಾಸಕ ಹರೀಶ್ ಪೂಂಜ ಅವರು ಮಾತನಾಡಿ, ಪುಂಜಾಲಕಟ್ಟೆ ಚಾಮಾ೯ಡಿ ರಸ್ತೆ ಅಭಿವೃದ್ಧಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರಲ್ಲಿ ವಿನಂತಿಸಿ,
ಡಿಪಿಆರ್ ತಯಾರಿಸಿ ರೂ.
700 ಕೋಟಿ ಅನುದಾನ ಮಂಜೂರು ಆಯಿತು. ಇದರ ಗುತ್ತಿಗೆಯನ್ನು ನಾಗಪುರದ ಡಿ.ಪಿ ಜೈನ್ ವಹಿಸಿಕೊಂಡು ಕಳೆದ ವರ್ಷ ಕೆಲಸ ಆರಂಭಿಸಿದರು. ಆದರೆ ದ.ಕ ಜಿಲ್ಲೆ ಇತರ ಜಿಲ್ಲೆಗಳಂತೆ ಅಲ್ಲ ಇಲ್ಲಿ ಆರೇಳು ತಿಂಗಳು ಮಳೆಯಿಂದಾಗಿ ಕೆಲಸ ಮಾಡಲು ಸಾಧ್ಯವಿಲ್ಲ. ಅವರಿಗೆ ಇದರ ಅನುಭವ ಇಲ್ಲದೆ ಸಮಪ೯ಕವಾಗಿ ಕೆಲಸ ಮಾಡಲು ಆಗಲಿಲ್ಲ. ಇದರಿಂದಾಗಿ ಜನರಿಗೆ ಸಮಸ್ಯೆ ಆಯಿತು. ಸಂಸದ ಬ್ರಿಜೇಶ್ ಚೌಟ ಅವರ ಗಮನಕ್ಕೆ ತಂದಾಗ ಅವರು ಜನರ ಸಮಸ್ಯೆಯನ್ನು ತಿಳಿದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಹೆದ್ದಾರಿ ಇಲಾಖೆ ಅಧಿಕಾರಿಗಳಲ್ಲಿ ಮಾತನಾಡಿ
ಜಿಲ್ಲೆಯಲ್ಲಿ ಅನುಭವ ಇರುವ ಗುತ್ತಿಗೆದಾರ ವ್ಯವಸ್ಥೆ ಮಾಡಿದ್ದಾರೆ ಎಂದು ಹೇಳಿದರು.
ಪತ್ರಿಕಾ ಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಉಪಸ್ಥಿತರಿದ್ದರು.

Related posts

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya

ಪುದುವೆಟ್ಟು ಶ್ರೀಧ.ಮಂ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ಬಿಜೆಪಿ ಕೊಕ್ಕಡ 237ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಶಶಿಕುಮಾರ್, ಕಾರ್ಯದರ್ಶಿಯಾಗಿ ಶ್ರೀಧರ್ ಆಯ್ಕೆ

Suddi Udaya
error: Content is protected !!