ಬೆಂಗಳೂರು: ಇಲ್ಲಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಧರಣಿ ಸತ್ಯಾಗ್ರಹದಲ್ಲಿ ಬೆಳ್ತಂಗಡಿ ತಾಲೂಕಿನ 50 ಕ್ಕೂ ಅಧಿಕ ಶಿಕ್ಷಕರು ಪಾಲ್ಗೊಂಡು ಬೆಂಬ ಸೂಚಿಸಿದರು.
ರಾಜ್ಯದ ಶಿಕ್ಷಕರ ಬೇಡಿಕೆಗಳೇನು?
1) 2017 ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸಿ,ಪದವಿ ಪೂರ್ಣಗೊಳಿಸಿರುವ ಶಿಕ್ಷಕರನ್ನು ಸೇವಾ ಜೇಷ್ಠತೆಯೊಂದಿಗೆ “ಪದವೀಧರ ಶಿಕ್ಷಕರೆಂದು ಪದನಾಮೀಕರಿಸುವುದು.
2) ಅರ್ಹ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016 ರ ಪೂರ್ವದಂತೆ ಪ್ರೌಢಶಾಲೆಗೆ ಬಡ್ತಿ ನೀಡಬೇಕು.
3)ಪ್ರಾಥಮಿಕ ಶಾಲಾ ಶಿಕ್ಷಕರಿಗೆ 2016 ರ ಪೂರ್ವದಂತೆ ಮುಖ್ಯಗುರುಗಳ ಹಾಗೂ ಹಿರಿಯ ಮುಖ್ಯಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು.
ಈ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಈಗಾಗಲೇ ತಾಲೂಕು, ಜಿಲ್ಲಾ ಹಂತದಲ್ಲಿ ಸರಕಾರಕ್ಕೆ ಮನವಿ ಅಭಿಯಾನ ನಡೆಸಿದ್ದು,ಅಂತಿಮವಾಗಿ ಇಂದು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ,ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ನಡೆದ ಬೃಹತ್ ಧರಣಿಯಲ್ಲಿ ಸುಮಾರು ಒಂದು ಲಕ್ಷದಷ್ಟು ಶಿಕ್ಷಕರು ಭಾಗಿಯಾಗಿ ಸರಕಾರದ ಗಮನ ಸೆಳೆಯುವಲ್ಲಿ ಸಫಲರಾಗಿದ್ದಾರೆ.ಬೆಳ್ತಂಗಡಿ ಸಂಘದ ಅಧ್ಯಕ್ಷರಾದ ಕಿಶೋರ್ ಕುಮಾರ್ ಎಚ್.ಕೆ,ಪ್ರಧಾನ ಕಾರ್ಯದರ್ಶಿ ಸುರೇಶ್ ಮಾಚಾರ್ ನೇತೃತ್ವದಲ್ಲಿ, ಜಿಲ್ಲಾ ಖಜಾಂಚಿ ರಾಜೇಶ್ ನೆಲ್ಯಾಡಿ,ಜಿಲ್ಲಾ ಸಹಕಾರ್ಯದರ್ಶಿ ಅಮಿತಾನಂದ ಹೆಗ್ಡೆ,ತಾಲೂಕಿನ ಉಪಾಧ್ಯಕ್ಷರಾದ ಕಿರಣ್ ಕುಮಾರ್, ಸಂಘಟನಾ ಕಾರ್ಯದರ್ಶಿ ಮಂಗಳಾ,ಕೆ,ಸಹಕಾರ್ಯದರ್ಶಿ ದಿನೇಶ್ ನಾಯಕ್ ಸೇರಿದಂತೆ ಅನೇಕ ಶಿಕ್ಷಕರು ಪಾಲ್ಗೊಂಡಿದ್ದರು.