24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ.ಗು.ನಾ. ಸ್ವಾ.ಸೇ. ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಕಾರ್ಯಕ್ರಮ ಹಾಗೂ ನಾಟಿ ವೈದ್ಯರಿಗೆ ಸನ್ಮಾನ

ವೇಣೂರು: ಯುವವಾಹಿನಿ ವೇಣೂರು ಘಟಕ ಹಾಗೂ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕೊಕ್ರಾಡಿ ಇದರ ಜಂಟಿ ಆಶ್ರಯದಲ್ಲಿ ಆಟಿದ ಗಮ್ಮತ್ ಹಾಗೂ ನಾಟಿ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಆ 11ರಂದು ಕೊಕ್ರಾಡಿ ಬಿಲ್ಲವ ಸಂಘದಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾದ ಶುಭಕರ್ ಸಾವ್ಯ ವಹಿಸಿದ್ದರು.

ಉದ್ಘಾಟನೆಯನ್ನು ಕೊಕ್ರಾಡಿ ಶ್ರೀ ಗು.ಸ್ವಾ.ಸೇ. ಸಂಘದ ಅಧ್ಯಕ್ಷರಾದ ಮಂಜಪ್ಪ ಪೂಜಾರಿ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಬೆಳ್ತಂಗಡಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಎಂ ಕೆ ಪ್ರಸಾದ್, ಮುಖ್ಯ ಅತಿಥಿಗಳಾಗಿ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರಿನ ಕಾರ್ಯದರ್ಶಿಗಳಾದ ಜಗದೀಶ್ಚಂದ್ರ ಡಿ ಕೆ, ಶ್ರೀ ಗು ನಾ ಸ್ವಾ ಸೇ ಸಂಘದ ಅಧ್ಯಕ್ಷರಾದ ಹರೀಶ್ ಪೊಕ್ಕಿ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾದ ಸದಾಶಿವ ಊರ, ಕೇಂದ್ರ ಸಮಿತಿ ನಾಮನಿರ್ದೇಶಿತ ಸದಸ್ಯರದ ಸುರೇಶ್ ಅಂಡಿಂಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನಾಟಿ ವೈದ್ಯರಾದ ಗುಲಾಬಿ ಹಾಗೂ ಕಮಲರವರನ್ನು ಸನ್ಮಾನಿಸಲಾಯಿತು.

ಘಟಕದ ಸಲಹೆಗಾರರಾದ ರಾಕೇಶ್ ಕುಮಾರ್ ಮೂಡುಕೋಡಿ ಸನ್ಮಾನಿತರ ಪರಿಚಯ ಮಾಡಿದರು.ಘಟಕದ ನಿರ್ದೇಶಕರಾದ ಸುರೇಂದ್ರ ಕೋಟ್ಯಾನ್ ಪ್ರಾರ್ಥನೆ ನಡೆಸಿದರು. ಘಟಕದ ಸ್ಥಾಪಕಧ್ಯಕ್ಷರಾದ ನಿತೀಶ್ ಎಚ್ ಸ್ವಾಗತಿಸಿದರು. ಕಾರ್ಯದರ್ಶಿ ರಕ್ಷಿತ್ ಬಂಗೇರ ಅಂಡಿಂಜೆ ಧನ್ಯವಾದವಿತ್ತರು.ಘಟಕದ ಮಾಜಿ ಅಧ್ಯಕ್ಷರಾದ ಅರುಣ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿದರು.

ವೇದಿಕೆಯಲ್ಲಿ ಕೊಕ್ರಾಡಿ ಕಾಲೇಜಿನ ಮಕ್ಕಳಿಂದ ಆಟಿ ಕಲೆಂಜ ನೃತ್ಯ ಪ್ರದರ್ಶನಗೊಂಡಿತು

Related posts

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ತಣ್ಣೀರುಪಂತ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವಾರ್ಷಿಕ ಜಾತ್ರೋತ್ಸವ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!