27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಪುದುವೆಟ್ಟು : ಪುದುವೆಟ್ಟು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಪುದುವೆಟ್ಟು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಅನಿತಾ ಕುಮಾರಿ ರವರ ಅಧ್ಯಕ್ಷತೆಯಲ್ಲಿ ಆ.12 ರಂದು ಪುದುವೆಟ್ಟು ಗ್ರಾ.ಪಂ. ಸಭಾಭವನದಲ್ಲಿ ಜರುಗಿತು.

ಮಾರ್ಗದರ್ಶಕ ಅಧಿಕಾರಿಯಾಗಿ ಸಮಾಜಕಲ್ಯಾಣ ಇಲಾಖಾ ಅಧಿಕಾರಿ ಹೇಮಚಂದ್ರ ರವರು ಭಾಗವಹಿಸಿ ಗ್ರಾಮಸಭೆಯನ್ನು ಮುನ್ನಡೆಸಿದರು.

ಸಭೆಯಲ್ಲಿ ಇಲಾಖಾ ಅಧಿಕಾರಿಗಳಿಂದ ವಿವಿಧ ಇಲಾಖೆಯಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾ.ಪಂ. ಉಪಾಧ್ಯಕ್ಷ ಪೂರ್ಣಾಕ್ಷ ಬಿ, ಪಂಚಾಯತ್‌ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು , ಸದಸ್ಯರು, ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ್ರ ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ಬೇಬಿ ವಾರ್ಡ್ ಸಭೆಯಲ್ಲಿ ಬಂದ ಪ್ರಸ್ತಾವನೆಗಳನ್ನು ಓದಿದರು. ಸಿಬ್ಬಂದಿ ಉಷಾಪ್ರಭ ವರದಿ ವಾಚಿಸಿದರು. ಸಿಬ್ಬಂದಿ ರವಿಶಂಕರ್ ನಿರೂಪಿಸಿದರು.

Related posts

ಧಾರಾಕಾರವಾಗಿ ಸುರಿದ ಗಾಳಿ ಮಳೆ: ಮೇಲಂತಬೆಟ್ಟು ಕೆಲವು ಮನೆಗಳ ಮೇಲ್ಛಾವಣಿ ಕುಸಿತ

Suddi Udaya

ಗುರುವಾಯನಕೆರೆ: ಶ್ರೀ ಶಿವಂ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಶೇ.10-50 ವಿಶೇಷ ಆಫರ್

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಖಾಸಗಿ ಬಸ್ಸು ನೌಕರರ ಸಂಘದವರಿಂದ ಆಯ್ದ ಭಾಗದಲ್ಲಿ ಶ್ರಮದಾನದ ಮೂಲಕ ದುರಸ್ತಿ

Suddi Udaya

ಧರ್ಮಸ್ಥಳ: 25 ನೇ ವರ್ಷದ ಭಜನಾ ತರಬೇತಿ ಕಮ್ಮಟ ಸಮಾರೋಪ – ಭಜನೋತ್ಸವ ಸಮಾವೇಶ

Suddi Udaya

ಉಜಿರೆ ಗ್ರಾಮ ಪಂಚಾಯಿತಕ್ಕೆ
ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ

Suddi Udaya
error: Content is protected !!