ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ವತಿಯಿಂದ,ಯುವ ಬಿಲ್ಲವ ವೇದಿಕೆ ಸಹಕಾರದೊಂದಿಗೆ,ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ಭಾಗಿ- ಮುಂಡಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ನಡೆಯಿತು.

ಕ್ರೀಡಾಕೂಟಕ್ಕೆ ಸಂಘದ ಗೌರವಾಧ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ ಚೆನ್ನೆ ಮಣೆಗೆ ಕಾಯಿ ಹಾಕುವ ಮೂಲಕ ಚಾಲನೆ ನೀಡಿ ಶುಭ ಹಾರೈಸಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಮುಂಡಾಜೆ ಮುಖ್ಯ ಶಿಕ್ಷಕಿ ಸೇವಂತಿಯವರು ದೀಪ ಪ್ರಜ್ವಲಿಸುವುದರ ಮೂಲಕ ಉದ್ಘಾಟಿಸಿ ಆಟಿ ತಿಂಗಳ ಮಹತ್ವ, ಪ್ರಾಮುಖ್ಯತೆ ಬಗ್ಗೆ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ವಹಿಸಿ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಅರ್ಪಿಸಿದರು.

ವೇದಿಕೆಯಲ್ಲಿ ಬದನಾಜೆ ಶಾಲಾ ಮುಖ್ಯೋಪಾಧ್ಯಾಯರಾದ ನಿರಂಜನ್,ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕಾಧ್ಯಕ್ಷೆ ಲಲಿತಾ ಟೀಚರ್, ಅಧ್ಯಕ್ಷೆ ಭಾರತಿ ಸಂತೋಷ್,ಸಂಘದ ಕಾರ್ಯದರ್ಶಿ ಜಗದೀಶ್ ಪೂಜಾರಿ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಎಸ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್ ಉಪಸ್ಥಿತರಿದ್ದರು.

ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳು ಸೊಪ್ಪು, ಚಟ್ನಿ, ಕಸಾಯ, ಪದಾರ್ಥಗಳು,ಪಾಯಸ, ಚಿಕನ್ ಸೇರಿದಂತೆ ಸುಮಾರು 75 ಬಗೆಯ ತಿಂಡಿ ತಿನಿಸುಗಳನ್ನು ತಯಾರಿಸಿ ಮನೆಗಳಿಂದ ತಂದು ಎಲ್ಲರಿಗೂ ಹಂಚಿದರು.

ಮಹಿಳಾ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷೆ ಪುಷ್ಪ ಗೀರೀಶ್ ಪ್ರಾರ್ಥನೆ ಹಾಡಿದರು. ಅಧ್ಯಕ್ಷೆ ಭಾರತಿ ಸಂತೋಷ್ ಸ್ವಾಗತಿಸಿದರು. ಮಾಜಿ ಅಧ್ಯಕ್ಷೆ ವಿಶಾಲ ಜಗದೀಶ್ ನಿರೂಪಿಸಿದರು,ಮಾಲ ಎಂ.ಕೆ ತಿಂಡಿ, ತಿನಿಸುಗಳು ಪಟ್ಟ ವಾಚಿಸಿದರು, ಕಾರ್ಯದರ್ಶಿ ಅಶ್ವಿತಾ ಸಂತೋಷ್ ವಂದಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಗೌರವ ಮಾರ್ಗದರ್ಶಕ ಕೆ.ವಸಂತ ಸಾಲಿಯಾನ್, ಮಡಂತ್ಯಾರು ವರ್ತಕರ ಸಂಘದ ಉಪಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳು ಸಹಕರಿಸಿದರು.

ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ ವಿವಿಧ ಮನೋರಂಜನಾ ಸ್ಪರ್ದೆಗಳು ನಡೆದವು. ವಿವಿಧ ಖಾದ್ಯಗಳನ್ನು ತಯಾರಿಸಿ ತಂದ ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳನ್ನು ಗುರುತಿಸಲಾಯಿತು. ಸ್ಪರ್ದಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Leave a Comment

error: Content is protected !!