30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭ

ಬೆಳ್ತಂಗಡಿ : ಬೆಳ್ತಂಗಡಿ ವಕೀಲರ ಸಂಘ (ರಿ) ಇದರ ವತಿಯಿಂದ ಹಿರಿಯ ಶ್ರೇಣಿ ನ್ಯಾಯಾಧೀಶರಿಗೆ ಸ್ವಾಗತ ಸಮಾರಂಭವು ಆ. 12ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ನಡೆಯಿತು.

ಹಿರಿಯ ಶ್ರೇಣಿ ನ್ಯಾಯಾಧೀಶರಾದ ಮನು ಪಿ.ಕೆ. ಮಾತನಾಡಿ ವಕೀಲರ ಹಾಗೂ ನ್ಯಾಯಾಧೀಶರ ಸಂಬಂಧ ಒಂದೇ ನಾಣ್ಯದ ಎರಡು ಮುಖವಿದ್ದಂತೆ. ಜನರ ಸಮಸ್ಯೆಗಳಿಗೆ ಪರಿಹಾರ ಕೊಡಿಸುವ ಕೆಲಸವನ್ನು ಮಾಡಬೇಕು ಎಂದು ಮುಂದೆ ನಡೆಯುವ ಕಾರ್ಯಕ್ರಮಗಳಿಗೆ ಸಹಕಾರ ಕೋರಿದರು.

ವೇದಿಕೆಯಲ್ಲಿ ಬೆಳ್ತಂಗಡಿ ವಕೀಲರ ಸಂಘದ ಉಪಾಧ್ಯಕ್ಷ ಅಶೋಕ್ ಕರಿಯನೆಲ, ಪ್ರಧಾನ ಸಿವಿಲ್ ನ್ಯಾಯಧೀಶ ಸಂದೇಶ್ ಕೆ., ಹೆಚ್ಚುವರಿ ಸಿವಿಲ್ ನ್ಯಾಯಧೀಶ ವಿಜಯೇಂದ್ರ ಟಿ.ಎಚ್. ಉಪಸ್ಥಿತರಿದ್ದರು.

ವಕೀಲರ ಸಂಘದದ ಮಾಜಿ ಕಾರ್ಯದರ್ಶಿ ಮನೋಹರ ಕುಮಾರ್ ಎ. ನಿರೂಪಿಸಿದರು. ಹಿರಿಯ ವಕೀಲರ ಸಮಿತಿ ಅಧ್ಯಕ್ಷ ಅಲೋಶಿಯಸ್ ಎಸ್. ಲೋಬೋ ಸ್ವಾಗತಿಸಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ.ಕೆ ಧನ್ಯವಾದವಿತ್ತರು.

Related posts

ಸೆ.12-13: ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿಗಳ ಪತ್ತೆಗೆ ಆಗ್ರಹಿಸಿ ಒಕ್ಕಲಿಗರ ಹೋರಾಟ ಸಮಿತಿಯಿಂದ ಮಂಗಳೂರಿನಲ್ಲಿ ಧರಣಿ

Suddi Udaya

ಶಿರ್ಲಾಲು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಪದಗ್ರಹಣ

Suddi Udaya

ನಾಳೆ (ಎ.30) ನಾರಾವಿ ಉಪ ವಲಯಾರಣ್ಯಾಧಿಕಾರಿ ಕುಶಾಲಪ್ಪ ಗೌಡರವರಿಗೆ ಸೇವಾ ನಿವೃತ್ತಿ

Suddi Udaya

ಮುಂಡಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ ಪ್ರಭು ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಅಧಿಕಾರ ಹಸ್ತಾಂತರ

Suddi Udaya

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!