ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಸತತವಾಗಿ 9ನೇ ಬಾರಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರಶಸ್ತಿಗೆ ಆಯ್ಕೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘವು ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಕೊಡಲ್ಪಡುವ ಸಾಧನ ಪ್ರಶಸ್ತಿಗೆ ಒಂಭತ್ತನೆ ಭಾರಿಗೆ ಆಯ್ಕೆಯಾಗಿರುತ್ತದೆ.


2023-24 ನೇ ಸಾಲಿನಲ್ಲಿ ಸಹಕಾರ ಸಂಘವು 41709 ಸದಸ್ಯತನದೊಂದಿಗೆ, ರೂ.188.78 ಕೋಟಿ ಠೇವಣಿ, ರೂ.155.63 ಕೋಟಿ ಸಾಲ, ರೂ.212.24 ಕೋಟಿ ದುಡಿಯುವ ಬಂಡವಾಳದೊಂದಿಗೆ ರೂ.3.84 ಕೋಟಿ ನಿವ್ವಳ ಲಾಭ ಗಳಿಸಿರುತ್ತದೆ. 2023-24 ನೇ ಸಾಲಿನಲ್ಲಿ ರೂ.11.28 ಕೋಟಿ ವ್ಯವಹಾರ ನಡೆಸಿರುತ್ತದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಾತ್ರವಲ್ಲದೇ ಸಾಮಾಜಿಕ ಚಟುವಟಿಕೆಗಳನ್ನು ತನ್ನನ್ನು ತಾನು ತೊಡಗಿಸಿಕೊಂಡಿದೆ. ಸ್ವಂತ ಕೇಂದ್ರ ಕಚೇರಿ ಸುಮಾರು 5 ಕೋಟಿ ಮೊತ್ತದ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಜು.13 ರಂದು ಲೋಕರ್ಪಣೆಗೊಂಡಿದ್ದು ಇದರ ಎರಡನೇ ಮಡಿಯಲ್ಲಿ ಆಡಳಿತ ಕಚೇರಿಯನ್ನು ಹೊಂದಿರುತ್ತದೆ.


2023-24ನೇ ಸಾಲಿನಲ್ಲಿ ಸಂಘವು ತನ್ನ ಕಾರ್ಯವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಠ ಸಾಧನೆಯನ್ನು ಗಮನಿಸಿ 2023-24 ನೇ ಸಾಲಿನ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಹಾಗೂ ಆಡಳಿತ ಮಂಡಳಿ ನಿರ್ದೇಶಕರ ಸಮ್ಮುಖದಲ್ಲಿ ಸಾಧನ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ ಎಂದು ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಅಧ್ಯಕ್ಷರಾದ ಎನ್ ಪದ್ಮನಾಭ ತಿಳಿಸಿರುತ್ತಾರೆ.

Leave a Comment

error: Content is protected !!