23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

ಬೆಳ್ತಂಗಡಿ: ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟವು ಲಾಯಿಲ ಗ್ರಾಮದ ಪರಂಟಾಜೆ ಪುಷ್ಪ ಸದನದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟರ ಸಂಘದ ಮಾಜಿ ಅಧ್ಯಕ್ಷ ಉದ್ಯಮಿಗಳಾದ ಪುಷ್ಪರಾಜ್ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ಬಂಟರ ಆಚಾರ ವಿಚಾರಗಳನ್ನು ಯುವ ಪೀಳಿಗೆಗೆ ತಿಳಿಸಿಕೊಡುವ ಅಗತ್ಯತೆ ಇದೆ. ಆದ್ದರಿಂದ ಇಂತಹ ಕಾರ್ಯಕ್ರಮಗಳ ಆಯೋಜನೆ ಬಹಳ ಅರ್ಥಪೂರ್ಣವಾಗಿದೆ ಎಂದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ವಿಠಲ ಶೆಟ್ಟಿ “ಶ್ರದ್ಧಾ” ಲಾಯಿಲ, ವಸಂತ ಶೆಟ್ಟಿ “ಶ್ರದ್ಧಾ” ಶುಭ ಹಾರೈಸಿದರು. ಸದಾನಂದ ಕರ್ನೊಡಿ, ಪುಷ್ಪ ಶೆಟ್ಟಿ ಪರಂಟಾಜೆ, ಮೋನಪ್ಪ ಶೆಟ್ಟಿ ಎಣಿಂಜೆ ವೇದಿಕೆಯಲ್ಲಿದ್ದರು. ಗ್ರಾಮ ಸಮಿತಿ ಅಧ್ಯಕ್ಷ ಜನಾರ್ಧನ ಶೆಟ್ಟಿ ಪೆರಿಂದಿಲೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮಕ್ಕಳಿಗೆ ಹಾಗೂ ಬಂಟ ಭಾಂಧವರಿಗೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲಾಗಿತ್ತು. ಗ್ರಾಮದ ವಿವಿಧ ಮನೆಯವರು ತಯಾರಿಸಿ ತಂದಿದ್ದ ಸುಮಾರು 30 ಬಗೆಯ ವಿವಿಧ ಆಹಾರ ಖಾಧ್ಯಗಳ ಸವಿಯನ್ನು ಸಭೆಯಲ್ಲಿ ಸೇರಿದ್ದವರು ಸವಿದರು. ಸುರೇಶ್ ಶೆಟ್ಟಿ ಲಾಯಿಲ ಕಾರ್ಯಕ್ರಮ ನಿರೂಪಿಸಿದರು.

ಅಧ್ಯಾಪಕ ಸುರೇಶ್ ಶೆಟ್ಟಿ ಕೊಡೈಲು ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀನಿವಾಸ ಶೆಟ್ಟಿ ಎಣಿಂಜೆ ಹಾಗೂ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು. ಪ್ರಸಾದ್‌ ಶೆಟ್ಟಿ ಎಣಿಂಜೆ ಧನ್ಯವಾದವಿತ್ತರು.

Related posts

ಜೂ.19: ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯ ನಡೆಸಲು ಗ್ರಾಮಸ್ಥರ ಸಭೆ

Suddi Udaya

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾರ್ಯಾಲಯ ಹಾಗೂ ಭಜನೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಕೃಷಿಕ ಪಿ ಶಾಂತರಾಮ ಹೃದಯಾಘಾತದಿಂದ ನಿಧನ

Suddi Udaya
error: Content is protected !!