24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

ಬೆಳ್ತಂಗಡಿ: ನಿಡ್ಲೆ ಆದಿತ್ಯ ವ್ಯೂನಲ್ಲಿ ನಡೆಯುತ್ತಿದ್ದ ಭಾರತೀಯ ಮಾಜ್ದೂರು ಸಂಘ ಕರ್ನಾಟಕ ರಾಜ್ಯದ ರಾಜ್ಯ ಅಭ್ಯಾಸ ವರ್ಗಕ್ಕೆ
ದ.ಕ ಜಿಲ್ಲೆಯ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಸಂಘಟನೆ ಕಡೆಯಿಂದ ಸಂಸದರನ್ನು ಗೌರವಿಸಲಾಯಿತು, ಗೌರವ ಸ್ವೀಕರಿಸಿ ಮಾತನಾಡಿದ ಸಂಸದರು, ಬಿ ಎಮ್ ಎಸ್ ಸಂಘಟನೆ ವಿಶ್ವದ ಅತೀ ದೊಡ್ಡ ಕಾರ್ಮಿಕ ಸಂಘಟನೆಯಾಗಿದೆ,ಕಾರ್ಮಿಕ ಪರವಾಗಿ ದ್ವನಿ ಎತ್ತುವ ಸಂಘಟನೆ ಈ ಸಂಘಟನೆಯ ಹೋರಾಟದ ಫಲವಾಗಿ ಕೇಂದ್ರ ಸರಕಾರವು ಕಾರ್ಮಿಕ ಕಲ್ಯಾಣಕ್ಕಾಗಿ ವಿಶ್ವಕರ್ಮ ಯೋಜನೆ ತಂದಿದೆ ಇದನ್ನುಅನುಷ್ಠಾನ ಮಾಡುವಲ್ಲಿ ತಮ್ಮ ಸಂಘಟನೆ ಸಹಕಾರಬೇಕು. ಕಾರ್ಮಿಕರ ಜೊತೆ ನಿಮ್ಮ ಜೊತೆ ನಾನು ಸದಾ ಇರುತ್ತೇನೆ, ಕಾರ್ಮಿಕರ ಅಭ್ಯುದಕ್ಕೆ ಮುಂದಿನ ದಿನಗಳಲ್ಲಿ ಆಧ್ಯತೆಯನ್ನು ನೀಡುತ್ತೇನೆ ಎಂದು ಶುಭ ಹಾರೈಸಿದರು.

ಈ ಸಮದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ, ರಾಜ್ಯ ಅಧ್ಯಕ್ಷರಾದ ಎನ್ ಕೆ ಪ್ರಕಾಶ್, ರಾಜ್ಯ ಕಾರ್ಯದರ್ಶಿ ವಿಶ್ವನಾಥ್, ಜಿಲ್ಲಾ ಅಧ್ಯಕ್ಷರಾದ ಅನಿಲ್ ಕುಮಾರ್ ಯು, ಬೆಳ್ತಂಗಡಿಯ ಜಯರಾಜ್, ಉದಯ ಬಿ ಕೆ, ಮತ್ತು ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು. .

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಇಂದಬೆಟ್ಟು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನಕ್ಕೆ ನುಗ್ಗಿದ್ದ ಕಳ್ಳ

Suddi Udaya

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya
error: Content is protected !!