April 7, 2025
ಶಾಲಾ ಕಾಲೇಜು

ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆ ಇಲ್ಲಿನ ವಿದ್ಯಾರ್ಥಿನಿಯರಿಗೆ ಹದಿ ಹರೆಯದ ಹೆಣ್ಣು ಮಕ್ಕಳ ಆರೋಗ್ಯ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

ಕುವೆಟ್ಟು: ಗ್ರಾಮ ವಿಕಾಸ ಸಮಿತಿ ಕುವೆಟ್ಟು ಗುರುವಾಯನಕೆರೆ ಇದರ ವತಿಯಿಂದ ದಿನಾಂಕ ಅ10 ರಂದು ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆ ಇಲ್ಲಿನ ವಿದ್ಯಾರ್ಥಿನಿಯರಿಗೆ ಹದಿ ಹರೆಯದ ಹೆಣ್ಣು ಮಕ್ಕಳ ಆರೋಗ್ಯ ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಆರೋಗ್ಯ ಮಾಹಿತಿಯನ್ನು ತಾಲೂಕು ಆರೋಗ್ಯ ಇಲಾಖೆಯ ಶಿಕ್ಷಣಾಧಿಕಾರಿ ಅಮ್ಮಿ ಸಿಸ್ಟರ್ ರವರು ನೀಡಿದರು ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ ವಸಂತ ಗೌಡ ಉಪಸ್ಥಿತರಿದ್ದರು. ಅತಿಥಿಯಾಗಿ ಭಾಗವಹಿಸಿದ ಸರ್ಕಾರಿ ಪ್ರೌಢಶಾಲೆ ಗುರುವಾಯನಕೆರೆ ಇಲ್ಲಿನ ಮುಖ್ಯೋಪಾಧ್ಯಾಯಿನಿ ಪದ್ಮಲತಾ ರವರು ಮಾತನಾಡಿ ಈ ಕಾರ್ಯಕ್ರಮ ನಮ್ಮ ಶಾಲೆಯ ವಿಧ್ಯಾರ್ಥಿನಿಗಳಿಗೆ ಈ ಸಂದರ್ಭದಲ್ಲಿ ಸಿಗಬೇಕಾದ ಅತ್ಯುತ್ತಮ ಮಾಹಿತಿ ಗ್ರಾಮ ವಿಕಾಸ ಸಮಿತಿ ಕುವೆಟ್ಟು ಇವರ ಉತ್ತಮವಾದ ಕಾರ್ಯಕ್ರಮವಾಗಿ ಮೂಡಿ ಬಂದಿದೆ ಎಂದು ಹೇಳಿದರು ಶಾಲೆಯ ಅಧ್ಯಾಪಕರಾದ ಜಗನ್ನಾಥ್ ರವರು ಕಾರ್ಯಕ್ರಮ ನಿರ್ವಹಿಸಲು ಸಹಕರಿಸಿದರು ಕಾರ್ಯಕ್ರಮದಲ್ಲಿ ಸುಮಾರು 80 ವಿಧ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಹದಿಹರೆಯದ ಹೆಣ್ಣುಮಕ್ಕಳ ಆರೋಗ್ಯ ಎಂಬ ವಿಷಯದ ಕುರಿತು ನೀಡಲಾದ ಮಾಹಿತಿಯ ಪ್ರಯೋಜನ ಪಡೆದುಕೊಂಡರು . ಕಾರ್ಯಕ್ರಮದ ಕೊನೆಯಲ್ಲಿ ಮಾಹಿತಿ ಪಡೆದ ವಿಧ್ಯಾರ್ಥಿನಿಯರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿ ಈ ಮಾಹಿತಿ ಕಾರ್ಯಕ್ರಮ ನಮಗೆ ಬಹಳಷ್ಟು ಪ್ರಯೋಜನವಾಗಿದೆ ಎಂದು ಅನಿಸಿಕೆ ವ್ಯಕ್ತ ಪಡಿಸಿದರು ಕಾರ್ಯಕ್ರಮದಲ್ಲಿ ಪಡಂಗಡಿ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಮತ್ತು ಸ್ಥಳೀಯ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು ಗ್ರಾಮ ವಿಕಾಸ ಸಮಿತಿ ಸಂಚಾಲಕರಾದ ಪ್ರಕಾಶ್ ಕಾಮತ್ ರವರು ಸ್ವಾಗತಿಸಿದರು ರಾಮಚಂದ್ರ ಶೆಟ್ಟಿ ಧನ್ಯವಾದ ಅರ್ಪಿಸಿದರು

.

Related posts

ಬೆಳ್ತಂಗಡಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya
error: Content is protected !!