29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ನಿಡ್ಲೆ :ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ನಿಡ್ಲೆ ಇದರ ಸಭೆಯು ನಿಡ್ಲೆ ಕೆಬಿಜಿ ಕಾಂಪ್ಲೆಕ್ಸ್ ನಲ್ಲಿ ಆ. 10ರಂದು ಜರುಗಿತು.


ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕಾನೂನು ಸಲಹೆಗಾರ ನವೀನ್ ಬಿ.ಕೆ, ಕೃಷ್ಣಪ್ಪ ಗೌಡ ಸವಣಾಲು ಆಗಮಿಸಿದ್ದರು.

ವೇದಿಕೆಯಲ್ಲಿ ನಾಗೇಶ್ ಗೌಡ ಶೇಡಿ ಹಾಗೂ ಪ್ರಕಾಶ್ ಟೈಲರ್ ನಿಡ್ಲೆ, ಗೌಡರ ಯುವ ವೇದಿಕೆ ಅಧ್ಯಕ್ಷ ರಾಜೇಂದ್ರ ಗೌಡ ಗಾಣಂತಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಜರಗಿತು.

ಗೌರವಾಧ್ಯಕ್ಷರಾಗಿ ಭದ್ರಯ ಗೌಡ ಸಣಿಲ, ಅಧ್ಯಕ್ಷರಾಗಿ ನಾಗೇಶ್ ಗೌಡ ಶೇಡಿ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಪಿಲಿಕಜೆ, ಖಜಾಂಜಿಯಾಗಿ ಗೋಪಾಲಕೃಷ್ಣ ಐತ್ತೂರು ಆಯ್ಕೆಯಾದರು.

ಗಿರೀಶ್ ಗೌಡ ಬಾರಗುಡ್ಡೆ ಸ್ವಾಗತಿಸಿ, ಶ್ರೀಮತಿ ಪೂರ್ಣಿಮ ಪಿಲಿಕಜೆ ಕಾರ್ಯಕ್ರಮ ನಿರೂಪಿಸಿ, ವಸಂತ ಗೌಡ ನಿಡ್ಲೆ ವಂದಿಸಿದರು.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

Suddi Udaya

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಧರ್ಮಸ್ಥಳ ನಿವೃತ್ತ ಕೆ ಎಸ್ ಆರ್ ಟಿ ಸಿ ಬಸ್ಸು ಚಾಲಕ ವೆಂಕಪ್ಪ ಗೌಡ ನಿಧನ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya
error: Content is protected !!