ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಯಿತು.

ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ವಹಿಸಿ ಆಟಿ ತಿಂಗಳ ಮಹತ್ವವನ್ನು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಸ್ಥಳೀಯ ನಾಟಿವೈದ್ಯರಾದ ತಿಮ್ಮಪ್ಪ ಪೂಜಾರಿ ಬಲ್ಲಾಡಿ ರವರು ಉಪಸ್ಥಿತರಿದ್ದು ತುಳುನಾಡಿನ ಪರಂಪರೆಗೆ ಸಂಬಂಧಪಟ್ಟ ತುಳು ಪಾರ್ದನ ಹಾಡುಗಳನ್ನು ಮಕ್ಕಳಿಗೆ ತಿಳಿಸಿಕೊಟ್ಟರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಹರ್ಷಿತ ಆಟಿ ತಿಂಗಳಲ್ಲಿ ಆಚರಿಸುವ ಕಾರ್ಯಕ್ರಮಗಳ ವಿವರ ನೀಡಿದರು. ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರಾದ ಪವನ್ ಕುಮಾರ್ ರವರು ಸ್ವಾಗತಿಸಿ, ನಿಶಾಂತ್ ಕುಮಾರ್ ಧನ್ಯವಾದ ಗೈದ ಕಾರ್ಯಕ್ರಮವನ್ನು ಶಾಲಾ ಶಿಕ್ಷಕಿ ಜಿತಿಕ್ಷಾ ನಿರೂಪಿಸಿದರು.


ಮಕ್ಕಳಿಗೆ ಮಧ್ಯಾಹ್ನ ಹಲವಾರು ಹಳ್ಳಿ ಸೊಗಡಿನ ಊಟದ ವ್ಯವಸ್ಥೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಕುಣಿತ ಭಜನಾ ತರಬೇತಿ ಶಿಬಿರಕ್ಕೆ ಭಜನಾ ಪರಿಷತ್ ರಾಜ್ಯಾಧ್ಯಕ್ಷರ ಭೇಟಿ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳಾದ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿ ರವರನ್ನು ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸನ್ಮಾನ

Suddi Udaya

ಅಯೋಧ್ಯೆಯಲ್ಲಿನ ಶ್ರೀ ರಾಮನ ಮಂದಿರವು ಸುಂದರವಾಗಿ ಮೂಡಿಬಂದಿದೆ: ಡಾ| ಡಿ ವೀರೇಂದ್ರ ಹೆಗ್ಗಡೆ

Suddi Udaya

ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya
error: Content is protected !!