ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಯೋಜನಾ ವ್ಯಾಪ್ತಿಯಲ್ಲಿ ಜ್ಞಾನ ವಿಕಾಸ ಸೇವಾಪ್ರತಿನಿಧಿಯಾಗಿ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಂಯೋಜಕಿಯಾಗಿ ಶ್ರೀಮತಿ ಜಯಂತಿ ಕಾರ್ಯನಿರ್ವಹಿಸುತ್ತಿದ್ದು ವೇಣೂರು ಸೀತಾರಾಮ್ ಭಟ್ರ ಮನೆಯ ಅಂಗಳದಲ್ಲಿ ಸುಮಾರು 15 kg ಗಾತ್ರದ ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಹಿಡಿದು ಅರಣ್ಯ ಪ್ರದೇಶಕ್ಕೆ ಬಿಟ್ಟಿರುತ್ತಾರೆ.
ಇವರು ಇಲ್ಲಿ ತನಕ ಉಚಿತವಾಗಿ ಸುಮಾರು 25 ಹಾವುಗಳನ್ನು ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿರುತ್ತಾರೆ.