ಬೆಳ್ತಂಗಡಿ: 2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
2017 ರಲ್ಲಿ ರೂಪಿತಗೊಂಡಿರುವ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದೆಂದು ಹಾಗೂ 2016ಕ್ಕಿಂತ ಮೊದಲು ನೇಮಕಾತಿಯಾದ ಸರ್ವರಿಗೂ ಈ ಹಿಂದಿನಂತೆ ಪ್ರೌಢ ಶಾಲೆಗಳಿಗೆ ವಿದ್ಯಾರ್ಹತೆಯ ಆಧಾರದ ಮೇಲೆ ಬಡ್ತಿ ನೀಡುವುದು ಹಾಗೂ ಮುಖ್ಯ ಗುರುಗಳ ಹುದ್ದೆಗಳಿಗೆ ಸೇವಾ ಜೇಷ್ಠತೆಯಂತೆ ಬಡ್ತಿ ನೀಡಬೇಕೆಂದು ಬೆಳ್ತಂಗಡಿ ತಾಲ್ಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ) ಮನವಿ ಪತ್ರ ನೀಡಿದ್ದಾರೆ.
2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016 ರ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಇದರಿಂದ ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಕೂಡಲೇ ಸರಿಪಡಿಸಬೇಕೆಂದು ಅವರು ಪತ್ರದಲ್ಲಿ ವಿನಂತಿಸಿದ್ದಾರೆ.