September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

ಶಿಬಾಜೆ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆ ಆ. 13ರಂದು ರಾಜೀವ ಗಾಂಧಿ ಸೇವಾ ಕೇಂದ್ರ ಪೆರ್ಲದಲ್ಲಿ ಪಂಚಾಯತ್ ಅಧ್ಯಕ್ಷರಾದ ರತ್ನ ಬಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.


ಗ್ರಾಮಸಭೆಯ ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಹೇಮಲತಾ ರವರು ಭಾಗವಹಿಸಿದ್ದರು.

ಹಲವು ವರ್ಷಗಳಿಂದ ಪಂಚಾಯತ್ ನಲ್ಲಿ ಪಂಪ್ ಆಪರೇಟರ್ ಆಗಿ ಕೆಲಸ ನಿರ್ವಹಿಸಿ ಇದೆ ತಿಂಗಳು ನಿವೃತ್ತಿ ಹೊಂದಲಿರುವ ಸೇಸಪ್ಪ ಗೌಡ ರವರನ್ನು ಸನ್ಮಾನಿಸಲಾಯಿತು.

ಬೇರೆ ಬೇರೆ ಇಲಾಖೆಯ ಅಧಿಕಾರಿಗಳು ಇಲಾಖೆಯಿಂದ ಸಿಗುವ ಸೌಲಭ್ಯಗಳ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ದಿನಕರ್ ಕುರುಪ್, ನಿಕಟ ಪೂರ್ವ ಉಪಾಧ್ಯಕ್ಷರಾದ ವಿನಯಚಂದ್ರ ಟಿ, ಸದಸ್ಯರುಗಳಾದ ವನಿತಾ ವಿ ಶೆಟ್ಟಿಗಾರ್, ಯಮುನಾ ಹಾಗೂ ಗ್ರಾಮಲೆಕ್ಕಾಧಿಕಾರಿ ತೇಜಸ್ವಿ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಾಡ ಗೀತೆಯನ್ನು ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರು ಹಾಡಿದರು. ಸ್ವಾಗತ ಮತ್ತು ವರದಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯರಾಜ್ ನೆರವೇರಿಸಿದರು.

Related posts

ಚೌಪಲ್ ಕಾರ್ಯಕ್ರಮಕ್ಕೆ ಬೆಳ್ತಂಗಡಿಯಲ್ಲಿ ಚಾಲನೆ

Suddi Udaya

ಮಾ.15-19: ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನ ಪ್ರತಿಷ್ಠಾ ವರ್ಧಂತಿ ಮತ್ತು ವರ್ಷಾವಧಿ ಜಾತ್ರೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya
error: Content is protected !!