25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಕೊಯ್ಯೂರು : ” ತುಳು ಜಾನಪದ ನಂಬಿಕೆಗಳು ಮೂಢ ನಂಬಿಕೆಗಳಲ್ಲ. ಬದಲಾಗಿ ಅವುಗಳು ಮೂಲನಂಬಿಕೆಗಳು” ಎಂದು ವಾಣಿ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಮಹಾಬಲ ಗೌಡ ಅಭಿಪ್ರಾಯ ಪಟ್ಟರು.

ಅವರು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಅಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ತುಳು ಆಚರಣೆಗಳ ವೈಚಾರಿಕತೆ ಮತ್ತು ವೈಜ್ಞಾನಿಕ ಮಹತ್ವದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮಪಂಚಾಯತ್ ಸದಸ್ಯ ಲೋಕೇಶ್ ಪಾoಬೇಲು ವರ್ಷದ 12 ತಿಂಗಳಲ್ಲಿ ಆಟಿ ಅದರದೇ ಆದ ಮಹತ್ವ ಹೊಂದಿದ್ದು, ಆಟಿ ಅಮಾವಾಸ್ಯೆ,, ನಾಗರ ಪಂಚಮಿ ಹಬ್ಬಗಳು ಮತ್ತು ಆಟಿ ಕಲೆಂಜದ ಮಹತ್ವದ ಬಗ್ಗೆ ವಿವರಿಸಿದರು. ಸಂಸ್ಥೆಯ ಪ್ರಾಚಾರ್ಯ ಮೋಹನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ಗ್ರಾಮಪಂಚಾಯತ್ ಸದಸ್ಯೆ ಶ್ರೀಮತಿ ಹೇಮಾವತಿ, ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಧಾಕೃಷ್ಣ ತಚ್ಛಮೆ, ಬಂಟ್ವಾಳ ನ್ಯಾಯಾಲಯದ ಎ ಪಿ ಪಿ ಶ್ರೀಮತಿ ಹರಿಣಿ ಉಪಸ್ಥಿತರಿದ್ದರು.


ವಿದ್ಯಾರ್ಥಿನಿಯರಾದ ಪ್ರಜ್ಞಾ, ಭವ್ಯ, ಪ್ರಮಿತ, ಕವಿತಾ, ನಿಶ್ಮಿತಾ ಪ್ರಾರ್ಥಿಸಿದರು. ಅರ್ಥಶಾಸ್ತ್ರ ಉಪನ್ಯಾಸಕಿ ತೃಪ್ತಿ ಸ್ವಾಗತಿಸಿ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಭವ್ಯ ವಂದಿಸಿದರು. ಇತಿಹಾಸ ಉಪನ್ಯಾಸಕ ಲಕ್ಷ್ಮಣ ಗೌಡ,ಸಮಾಜ ಶಾಸ್ತ್ರ ಉಪನ್ಯಾಸಕ ಮಾಯಿಲ, ವಾಣಿಜ್ಯ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪ್ರೀತಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಕನ್ನಡ ಉಪನ್ಯಾಸಕಿ ಶ್ರೀಮತಿ ರಶ್ಮಿದೇವಿ ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya

ಶಿರ್ಲಾಲು: ಶ್ರೀ ತುಳಸಿ ಮೆನ್ಸ್ ಪಾರ್ಲರ್ ಶುಭಾರಂಭ

Suddi Udaya

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

Suddi Udaya

ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಪುರುಷರು

Suddi Udaya
error: Content is protected !!