April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರವರಿಂದ “ದಸ್ಕತ್” ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವ
ಸೆವೆಂಟಿ ಸೆವೆನ್ ಸ್ಟೂಡಿಯೋಸ್ ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು , ತಂಡವು ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಪೋಸ್ಟರನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೈಯಲ್ಲಿ ಬಿಡುಗಡೆಗೊಳಿಸಿದೆ.

ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ಈ ಚಿತ್ರದ ರಚನೆ ಮತ್ತು ನಿರ್ದೇಶನ ಮಾಡಿದ್ದಾರೆ.

ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಪ್ರಜ್ಞೇಶ್ ಶೆಟ್ಟಿ, ಕಾರ್ಯ ನಿರ್ವಹಿದ್ದಾರೆ. ಸಂತೋಷ್ ಆಚಾರ್ಯ ಗುಂಪಲಾಜೆಯವರ ಛಾಯಾಗ್ರಹಣದ ಈ ಚಿತ್ರವನ್ನು ಗಣೇಶ್ ನೀರ್ಚಾಲ್ ರವರು ಸಂಕಲನ ಮಾಡಿದ್ದಾರೆ.
ಸಮರ್ಥನ್ ಎಸ್ ರಾವ್ ರವರ ಸಂಗೀತವಿದೆ.

ದೀಕ್ಷಿತ್ ಕೆ ಅಂಡಿಂಜೆ ,ಚಂದ್ರಹಾಸ್ ಉಲ್ಲಾಳ್, ಯುವ ಶೆಟ್ಟಿ , ಮೋಹನ್ ಶೇಣಿ, ದೀಪಕ್ ರೈ ಪಾಣಾಜೆ,ನೀರಜ್ ಕುಂಜರ್ಪ,ಮಿಥುನ್ ರಾಜ್, ತಿಮ್ಮಪ್ಪ ಕುಲಾಲ್, ಯೋಗಿಶ್ ಶೆಟ್ಟಿ .,ಚೇತನ್ ಪಿಲಾರ್ ಹೀಗೆ ಇನ್ನೂ ಅನೇಕ ಕಲಾವಿದರ ದಂಡೇ ಈ ಚಿತ್ರದಲ್ಲಿದೆ.

ನಾಯಕಿಯಾಗಿ ಭವ್ಯ ಪೂಜಾರಿಯವರು ಬಣ್ಣ ಹಚ್ಚಿದ್ದಾರೆ.
ಚಲನಚಿತ್ರವು ಬೋಧಿ ಪ್ರೋಡಕ್ಷನ್ಸ್ ಸಹಯೋಗದೊಂದಿಗೆ ಮೂಡಿಬಂದಿದೆ.

ತಂಡದಲ್ಲಿ ಸ್ಮಿತೇಶ್ ಬಾರ್ಯ,ವಿನೋದ್ ರಾಜ್ ಕಲ್ಮಂಜ, ನಿಶಿತ್ ಶೆಟ್ಟಿ, ದೀಕ್ಷಿತ್ ಧರ್ಮಸ್ಥಳ , ಮನೋಜ್ ಆನಂದ್ ಮುಂತಾದವರು ಕಾರ್ಯ ನಿರ್ವಹಿಸಿದ್ದಾರೆ.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ಹಾಸನ ಮೂಲದ ವ್ಯಕ್ತಿ ಚಾರ್ಮಾಡಿ ಘಾಟ್ ನಲ್ಲಿ ಆತ್ಮಹತ್ಯೆಗೆ ಯತ್ನ: ಜೀವ ಉಳಿಸಿದ ಪೊಲೀಸರು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ರಕ್ತೇಶ್ವರಿ ಪದವು ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ನಾಗವೇಣಿ ಕೆ.ಎಸ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya
error: Content is protected !!