September 6, 2026
ಸಾಧಕರು

ಅತ್ಯುನ್ನತ ಸೇವೆಗಾಗಿ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯ್ ಕುಮಾ‌ರ್ ರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅತ್ಯುನ್ನತ ಸೇವೆಗಾಗಿ ಉಡುಪಿ ಜಿಲ್ಲಾ ಪೊಲೀಸ್‌ ಕಚೇರಿಯ ಡಿಸಿಆರ್ ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ ಸ್ಟೇಬಲ್ ಆಗಿ ಸೇವೆಸಲ್ಲಿಸುತ್ತಿರುವ ಬೆಳ್ತಂಗಡಿಯ ಬಿ. ವಿಜಯ್ ಕುಮಾ‌ರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಲಭಿಸಿದೆ.

ಇವರು 1993ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡು, 31 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಈವರೆಗೆ ಪಣಂಬೂರು, ಪುತ್ತೂರು ನಗರ, ಉರ್ವ, ಉಡುಪಿ ನಗರ, ಕುಂದಾಪುರ, ಉಡುಪಿ ಟ್ರಾಫಿಕ್, ಉಡುಪಿ ಮಹಿಳಾ ಠಾಣೆ

ಮತ್ತು ಹಿರಿಯಡ್ಕ ಠಾಣೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. 2022ರಲ್ಲಿ ಇವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದರು. ಮೂಲತಃ ಬೆಳ್ತಂಗಡಿಯ ಕೆಲ್ಲಗುತ್ತು ನಿವಾಸಿಯಾಗಿದ್ದು, ದಿ. ಗೋಪಾಲಕೃಷ್ಣ ಮತ್ತು ಶಾರದಾ ದಂಪತಿಯ ಸುಪುತ್ರರಾಗಿರುತ್ತಾರೆ.

Related posts

ಇಂಡಿಯಾ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಶ್ರದ್ಧಾ ಶೆಟ್ಟಿ ಎಣಿoಜೆ ರವರಿಗೆ ಸನ್ಮಾನ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕ : ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಗೌರವ ಪುರಸ್ಕಾರ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದಿಂದ ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ನ್ಯೂಸ್ 18 ವಾಹಿನಿಯ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಕ್ಸೆಲ್ ನ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!