April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ

ಉಜಿರೆ: ಬೆಳಾಲು ಶ್ರೀ ಧ. ಮ. ಅನುದಾನಿತ ಪ್ರೌಢಶಾಲೆಯಲ್ಲಿ ಆಟಿದ ಲೇಸ್ ಕಾರ್ಯಕ್ರಮ ನಡೆಯಿತು. 

ಉದ್ಘಾಟಕರಾಗಿ ಆಗಮಿಸಿದ ಶ್ರೀ ಧ. ಮ. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರಮೋದ್ ಕುಮಾರ್ ಅವರು ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ತುಳುನಾಡಿನ ಸಂಪ್ರದಾಯ ಪರಂಪರೆಯನ್ನು ಉಳಿಸಿಕೊಂಡು, ಆಚರಣೆ ಮಾತ್ರ ಆಗಿರದೆ ಪಾಲಿಸಿಕೊಂಡು ಬರಬೇಕು” ಎಂದು ತಿಳಿಸಿದರು 

ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಇವರು “ತುಳುನಾಡಿನ ಸಂಸ್ಕೃತಿಯನ್ನು ನೆನಪಿಸಿಕೊಳ್ಳುವ ಇಂತಹ ಕಾರ್ಯಕ್ರಮಗಳು ಹೆಚ್ಚು ಸೂಕ್ತ” ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮುಖ್ಯ ಶಿಕ್ಷಕ   ಜಯರಾಮ ಮಯ್ಯ “ನಮ್ಮ ಸಂಸ್ಕೃತಿಯ ಅರಿವನ್ನು ಪಡೆದುಕೊಂಡು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ” ಎಂದು ತಿಳಿಸಿದರು.

ಕಾರ್ಯಕ್ರಮದ ಸಂಯೋಜಕರಾದ ರವಿಚಂದ್ರ ಜೈನ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಆಟಿ ತಿಂಗಳ ವಿಶೇಷ ಖಾದ್ಯಗಳ ಪರಿಚಯವನ್ನು ನೀಡಿ ಸವಿಯಲಾಯಿತು. ಕಾರ್ಯಕ್ರಮದಲ್ಲಿ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಭವಾನಿ ಮಾರ್ಪಾಲು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಕನಿಕ್ಕಿಲ ಮತ್ತು ಎಲ್ಲಾ ಅಧ್ಯಾಪಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ದೀಕ್ಷಿತಾ ಸ್ವಾಗತಿಸಿ, ತ್ರಿಷಾ ಜೈನ್  ವಂದಿಸಿದ ಈ ಕಾರ್ಯಕ್ರಮವನ್ನು ಯೋಗಿತಾ ನಿರೂಪಿಸಿದರು

Related posts

ಆಗಷ್ಟ್ 28 : ಸೌಜನ್ಯ ಪ್ರಕರಣದ ತನಿಖೆಗೆ ಒತ್ತಾಯಿಸಿ ಚಲೋ ಬೆಳ್ತಂಗಡಿ ಮಹಾಧರಣಿ

Suddi Udaya

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ಕೊಕ್ಕಡ ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕದ ನೂತನ ಪದಾಧಿಕಾರಿಗಳ ರಚನೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಜೀವ ಜಲ ಜಾಗೃತಿ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya
error: Content is protected !!