23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಸಮಸ್ಯೆ

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

ಬೆಳ್ತಂಗಡಿ; ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ ಉಂಟಾಗಿದೆ.
ಇಸುಬು ಮತ್ತು ಅಬ್ದುಲ್ ರಹಿಮಾನ್ ಎಂಬವರ ಮನೆಗೆ ಸಂಜೆಯ ವೇಳೆ ಸಿಡಿಲು‌ಬಡಿದ ಪರಿಣಾಮ ಮನೆಯ ವಿದ್ಯುತ್ ಉಪಕರಣಗಳೆಲ್ಲವೂ ಸುಟ್ಟು ಕರಕಲಾಗಿದೆ. ಅಲ್ಲದೆ ಹಿಂಭಾಗದ ಶೀಟಿನ‌ ಮೇಲ್ಛಾವಣಿ ಕೂಡ ಪುಡಿಪುಡಿಯಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಅಬ್ದುಲ್ ರಹಿಮಾನ್ ಅವರ ಮನೆಯವರು ಘಟನೆಯ ವೇಳೆ ಕುಟುಂಬ ಸಮೇತ ಮೂಡಬಿದ್ರೆಗೆ ತೆರಳಿದ್ದರಿಂದ ಜೀವಾಪಾಯದಿಂದ ಪಾರಾಗಿದ್ದಾರೆ. ಇಸುಬು ಅವರ ಮನೆಯಲ್ಲಿ ಮಹಿಳೆಯರು ಮತ್ತು ಮಕ್ಕಳಿದ್ದರಾದರೂ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಸಿಡಿಲಿನ ಆಘಾತಕ್ಕೆ ಮನೆಯ ಕಿಟಕಿ ಬಾಗಿಲುಗಳು, ಗಾಜು, ಮೇಲ್ಛಾವಣಿಯ ಶೀಟು, ಹೆಂಚುಗಳಿಗೆ ಹಾನಿಯಾಗಿದೆ. ಗೋಡೆ ಕೂಡ ಬಿರುಕು ಬಿಟ್ಟಿದೆ. ಸದ್ರಿ ಮನೆಯಲ್ಲಿ ವಾಸಿಸಲು ಭಯಪಡುವಂತಾಗಿದೆ. ಅಲ್ಲದೆ ಇವರ ಪಕ್ಕದ ಮನೆಯವರ ಇನ್ವರ್ಟರ್ ಗಳು, ವಿದ್ಯುತ್ ಉಪಕರಣಗಳು ಕೆಟ್ಟು ಹೋಗಿದೆ. ವಿಚಾರ ತಿಳಿದ ವೇಣೂರು ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಸಂಬಂಧಪಟ್ಟ ಇಲಾಖೆಯಿಂದ ಪರಿಹಾರದ ಭರವಸೆ ನೀಡಿದ್ದಾರೆ

Related posts

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭ

Suddi Udaya

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya
error: Content is protected !!