ಬೆಳ್ತಂಗಡಿ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಮಹತ್ತರ ಪಾತ್ರವಹಿಸಿದ್ದು ಅದು ಅಪಾರ ಕೊಡುಗೆ ನೀಡಿದೆ..
ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಕೊಡುಗೆ ಶೂನ್ಯ. ಭಾರತವನ್ನು ರಕ್ಷಣೆ ಮಾಡುವ ಬದಲು ಮಾರಾಟ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ಕಮಲ ಮುಖಂಡರು ನಕಲಿ ದೇಶ ಭಕ್ತರು. ಧರ್ಮ, ಜಾತಿಗಳ ನಡುವೆ ಜಗಳ ಹಚ್ಚಿ, ವಿಷ ಬೀಜ ಬಿತ್ತುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿ ಆವರಣದಲ್ಲಿ, 78ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ತುಳಿತಕ್ಕೊಳಗಾದ ಜನರಿಗೆ ಸಂವಿಧಾನದ ಮೂಲಕ ನ್ಯಾಯವನ್ನು ಒದಗಿಸಿದ್ದಾರೆ. ಸರ್ಕಾರಿ ಸೌಲಭ್ಯ ಪಡೆದುಕೊಂಡು ಎಲ್ಲರೂ ಶಿಕ್ಷಣ ಪಡೆದುಕೊಂಡು ಮುಖ್ಯವಾಹಿನಿಗೆ ಬರಬೇಕು. ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯವಿದೆ. ಹೀಗಾಗಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮೂಲಕ ಜನರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರ ಸಂಕಷ್ಟದ ಸಂದರ್ಭದಲ್ಲಿ ಸಹಾಯ ನೀಡಲು ಪ್ರಾರಂಭಿಸಿದ ಇಂದಿರಾ ಸಹಾಯ ಹಸ್ತವನ್ನು ಮೇಲತಂಬೆಟ್ಟು ಗ್ರಾಮದ ವಸಂತ ರವರಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಸೇವಾದಳದ ಅಧ್ಯಕ್ಷ ಪ್ರದೀಪ್ ಕೆ.ಸಿ,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ ಕುಮಾರ್ , ಪಕ್ಷದ ಮುಖಂಡರಾದ ಶ್ರೀಮತಿ ಲೋಕೆಶ್ವರಿ ವಿನಯಚಂದ್ರ ಗೌಡ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ,ನಮಿತಾ ಪೂಜಾರಿ ,ಗ್ಯಾರಂಟಿ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾಲಾಡಿ,ತಾಲೂಕು ಕೆಡಿಪಿ ಸದಸ್ಯರಾದ ಇಸ್ಮಾಯಿಲ್ ಪೆರಿಂಜೆ ಅಕ್ರಮ ಸಕ್ರಮ ಸಮಿತಿಯ ಶ್ರೀಮತಿ ವಿನುತಾ ರಜತ್ ಗೌಡ ,ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಅಬ್ದುಲ್ ಬಶೀರ್ ,ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ವಿನ್ಸೆಂಟ್ ಡಿಸೋಜಾ ,ಜಯಶೀಲ ಗೌಡ ,ಡಿಸಿಸಿ ಸದಸ್ಯರಾದ ಶ್ರೀಮತಿ ಶೋಭ ನಾರಾಯಣ ಗೌಡ,ಹಾಗೂ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ,ಕಾರ್ಯಕರ್ತರು ಉಪಸ್ಥಿತರಿದ್ದರು.