31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ವತಿಯಿಂದ 78ನೇ ವಷ೯ದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಬೆಳ್ತಂಗಡಿ ತಾಲೂಕು ವತಿಯಿಂದ 78 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ಆ.15 ರಂದು ಬೆಳ್ತಂಗಡಿ ತಾಲೂಕು ಕಛೇರಿ ಆವರಣದಲ್ಲಿ ಸಂಭ್ರಮದಿಂದ ನೆರವೇರಿತು.

ತಹಶೀಲ್ದಾರ್ ಪೃಥ್ವಿ ಸಾನಿಕಂ ಧ್ವಜಾರೋಹಣವನ್ನು ನೆರವೇರಿಸಿದರು.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿದ್ದರು., ಪ್ರಧಾನ ಭಾಷಣಕಾರರಾಗಿ ನಾವೂರು ಆರೋಗ್ಯ ಕ್ಲಿನಿಕ್‌ನ ಡಾ.ಪ್ರದೀಪ್ ಎ. ಸ್ವಾತಂತ್ರ್ಯೋತ್ಸವದ ಮಹತ್ವದ ಬಗ್ಗೆ ತಿಳಿಸಿದರು.

ಈ ಸಂದರ್ಭ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ಸಕ೯ಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಬೆಳ್ತಂಗಡಿ ತಾಲೂಕು ಮಟ್ಟದ ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಪರಿಸರ ದಿನಾಚರಣೆ

Suddi Udaya

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya

ಇಂದಿನಿಂದ ಬೆಳ್ತಂಗಡಿಯಲ್ಲಿ ಭಾರಿ ರಿಯಾಯಿತಿಯಲ್ಲಿ ಬಟ್ಟೆಗಳ ಮಾರಾಟ

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!