25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿಗಳಾದ ವಂ|ಡಾ|ಸ್ಟ್ಯಾನಿ ಗೋವಿಯಸ್ ಧ್ವಜಾರೋಹಣ ನೆರವೇರಿಸಿದರು.

ಅಗಸ್ಟ್ 15 ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸುವ ದಿನವಾಗಿದೆ. ಪ್ರಪಂಚದಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಸಾರಿದ ಏಕೈಕ ರಾಷ್ಟ್ರವೆಂದರೆ ಅದು ಭಾರತ ಮಾತ್ರ.
ರಾಷ್ಟ್ರ ನಮಗೆ ಏನನ್ನು ಕೊಡುತ್ತದೆ ಇದು ಮುಖ್ಯವಲ್ಲ ನಾವು ರಾಷ್ಟ್ರಕ್ಕಾಗಿ ಯಾವ ಕೊಡುಗೆಯನ್ನು ನೀಡುತ್ತೇವೆ ಇದು ಬಹಳ ಮುಖ್ಯ. ಕಾನೂನು, ಸೌಹಾರ್ದತೆ, ಸಾಮರಸ್ಯಕ್ಕೆ ಧಕ್ಕೆ ತರದೆ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡರೆ ದೇಶ ಸೇವೆ ಮಾಡಿದಂತೆ, ರಾಷ್ಟ್ರ ಅಭಿವೃದ್ಧಿಯ ಕಾರ್ಯದಲ್ಲಿ ಸರ್ವರು ಕೈಜೋಡಿಸೋಣ ಎಂದು ಅವರು ತಮ್ಮ ಸಂದೇಶವನ್ನು ನೀಡಿದರು.


ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ವಂ| ದೀಪಕ್ ಡೇಸಾ, ಗಾರ್ಡಿಯನ್ ಏಂಜಲ್ಸ್ ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಹೆಲೆನ್ ಮೋನಿಕಾ ಲೋಬೊ, ಸೇಕ್ರೆಡ್ ಹಾರ್ಟ್ ಪ್ರೌಢಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಶಾಂತಿ ಮೇರಿ ಡಿಸೋಜ, ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷರಾದ ವಿನಯ್ ಡಿಸೋಜ, ಐವನ್ ಸಿಕ್ವೇರಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಎನ್. ಸಿ.ಸಿ,ಕಬ್ಸ್, ಸ್ಕೌಟ್ಸ್ , ಬುಲ್ ಬುಲ್,ಗೈಡ್ಸ್, ಮುಂತಾದ ತಂಡಗಳಿಂದ ಆಕರ್ಷಕ ಪಥ ಸಂಚಲನ ಜರುಗಿತು. ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸೂರಜ್ ಚಾರ್ಲ್ಸ್ ಸ್ವಾಗತಿಸಿ,ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಅಲೆಕ್ಸ್ ಐವನ್ ಸಿಕ್ವೇರಾ ವಂದಿಸಿದರು, ವಿದ್ಯಾರ್ಥಿ ಆಷ್ಟ್ನ್ ಪಿಂಟೋ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಕುರಿತು ಮಾತನಾಡಿದರು. ಉಪನ್ಯಾಸಕಿ ಹೇಮಲತಾ.ಎಂ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Related posts

ಕಬ್ಬಡಿ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜು ಪುರುಷರ ವಿಭಾಗ ಚಾಂಪಿಯನ್: ತಂಡದ ಆಟಗಾರರಲ್ಲಿ ನಾಲ್ವರು ರಾಷ್ಟ್ರಮಟ್ಟದಲ್ಲಿ ಚಾಂಪಿಯನ್ ಶಿಪ್

Suddi Udaya

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪೊಷಣ್ ಅಭಿಯಾನದಡಿ ಸಿರಿಧಾನ್ಯ ಮಾಹಿತಿ ಕಾರ್ಯಕ್ರಮ

Suddi Udaya

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya
error: Content is protected !!