April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

ಗುರುವಾಯನಕೆರೆ: ನಗರದ ವಿದ್ವತ್ ಪಿಯು ಕಾಲೇಜಿನಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿ ಮಕ್ಕಳನ್ನುದ್ದೇಶಿಸಿ ಮಾತನಾಡಿದರು.

ಆಡಳಿತಾಧಿಕಾರಿಗಳಾದ ಚಂದ್ರಶೇಖರ ಗೌಡರವರು ಸ್ವಾತಂತ್ರ್ಯ ಸಂಗ್ರಾಮದ ತ್ಯಾಗ ಬಲಿದಾನದ ಇತಿಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ನಂತರ ವಿದ್ವತ್ ಪಿಯು ಕಾಲೇಜಿನ ತನ್ನ ಪ್ರಪ್ರಥಮ ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಮರಣೀಯ ಮಾಡಲು “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ”ಎಂಬ ಶೀರ್ಷಿಕೆಯಡಿಯಲ್ಲಿ ಬೆಳಗ್ಗೆ 11.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು ತೆರೆದಿಟ್ಟು, ಅನುಭವಿಸಿ, ಅರ್ಥೈಸಿ, ವಿವೇಚನೆಗೊಳಪಡಿಸುವ ವಿಶೇಷ ಸಂವಾದ ಇದಾಗಿತ್ತು, ಯುವ ಮನಸ್ಸುಗಳ ಮೇಲೆ ವೈಜ್ಞಾನಿಕ ವಿಶ್ಲೇಷಣೆಯ ಪ್ರಭಾವ ಬೀರಿ ಊಹೆಗೆ ನಿಲುಕದ ಪ್ರಕೃತಿಯ ವಿಸ್ಮಯವನ್ನು ಅರ್ಥೈಸಿಕೊಳ್ಳುವ ಒಂದು ವಿಶೇಷ ಪ್ರಯತ್ನ ಇದಾಗಿತ್ತು. ಸಾಂಪ್ರದಾಯಿಕ ಪಾಠ-ಪ್ರವಚನ ಮತ್ತು ಪರೀಕ್ಷಾ ಪದ್ಧತಿಗಿಂತ ವಿಭಿನ್ನವಾಗಿ ಆಲೋಚಿಸುವ ಪ್ರಯತ್ನ ಇದಾಗಿತ್ತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ. ಮಂಡಗಳಲೆ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಮಚಂದ್ರ ಎಮ್.ಎಸ್. ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರತಾಪ್ ದೊಡ್ಡಮನೆ ಅವರು ತಮ್ಮ ಸುದೀರ್ಘ ಶೈಕ್ಷಣಿಕ ಅನುಭವದ ಆಧಾರದ ಮೇಲೆ ವಿಜ್ಞಾನದ ವಿಸ್ಮಯವನ್ನು ವ್ಯಾಖ್ಯಾನಿಸಿದರು.

ಈ ಅಪರೂಪದ ಕಾರ್ಯಾಗಾರಕ್ಕೆ 7 ಪ್ರೌಢಶಾಲಾ ಹಾಗೂ ಪಿಯು ಕಾಲೇಜಿನ 52 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂವಾದ ಕಾರ್ಯಗಾರದಲ್ಲಿ ಉತ್ತಮ ಪ್ರಶ್ನೆ ಕೇಳಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ನೀಡಲಾಯಿತು. ಈ ಅರ್ಥಪೂರ್ಣ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಲಾಯಿತು.

Related posts

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘ ನೂತನ ಸಮಿತಿಗೆ ತಾಲೂಕಿನ ಐದು ಸದಸ್ಯರ ಆಯ್ಕೆ

Suddi Udaya

ತೆಂಕಕಾರಂದೂರು ಗ್ರಾಮದಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ; ಆರೋಪಿಗಳ ಶೀಘ್ರ ಪತ್ತೆಗಾಗಿ ದ.ಕ ಜಿಲ್ಲಾ ಪೊಲೀಸ್ ಅಧೀಕ್ಷಕ ರಿಶ್ಯಂತ್ ಅವರಿಗೆ ಮನವಿ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಗೆ ಯೂತ್ ಫಾರ್ ಸೇವಾ ಎನ್.ಜಿ ಒ ಸಂಸ್ಥೆಯ ವತಿಯಿಂದ ಡಿಜಿಟಲ್ ಸ್ಮಾರ್ಟ್ ಕ್ಲಾಸ್ ಅಳವಡಿಕೆ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya
error: Content is protected !!