September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿದ್ವತ್ ಪಿಯು ಕಾಲೇಜಿನಲ್ಲಿ ವಿಶೇಷ ಕಾರ್ಯಕ್ರಮ: ವಿಜ್ಞಾನ-ವಿಸ್ಮಯ ಮತ್ತು ಕುತೂಹಲ” ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ಕಾರ್ಯಾಗಾರ

ಗುರುವಾಯನಕೆರೆ: ನಗರದ ವಿದ್ವತ್ ಪಿಯು ಕಾಲೇಜಿನಲ್ಲಿ ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.

ಸಂಸ್ಥೆಯ ಅಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿ ಮಕ್ಕಳನ್ನುದ್ದೇಶಿಸಿ ಮಾತನಾಡಿದರು.

ಆಡಳಿತಾಧಿಕಾರಿಗಳಾದ ಚಂದ್ರಶೇಖರ ಗೌಡರವರು ಸ್ವಾತಂತ್ರ್ಯ ಸಂಗ್ರಾಮದ ತ್ಯಾಗ ಬಲಿದಾನದ ಇತಿಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ನಂತರ ವಿದ್ವತ್ ಪಿಯು ಕಾಲೇಜಿನ ತನ್ನ ಪ್ರಪ್ರಥಮ ಸ್ವಾತಂತ್ರ್ಯ ದಿನಾಚರಣೆಯನ್ನು ಸ್ಮರಣೀಯ ಮಾಡಲು “ವಿಜ್ಞಾನ-ವಿಸ್ಮಯ ಮತ್ತು ಕುತೂಹಲ”ಎಂಬ ಶೀರ್ಷಿಕೆಯಡಿಯಲ್ಲಿ ಬೆಳಗ್ಗೆ 11.30ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು.

ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು ತೆರೆದಿಟ್ಟು, ಅನುಭವಿಸಿ, ಅರ್ಥೈಸಿ, ವಿವೇಚನೆಗೊಳಪಡಿಸುವ ವಿಶೇಷ ಸಂವಾದ ಇದಾಗಿತ್ತು, ಯುವ ಮನಸ್ಸುಗಳ ಮೇಲೆ ವೈಜ್ಞಾನಿಕ ವಿಶ್ಲೇಷಣೆಯ ಪ್ರಭಾವ ಬೀರಿ ಊಹೆಗೆ ನಿಲುಕದ ಪ್ರಕೃತಿಯ ವಿಸ್ಮಯವನ್ನು ಅರ್ಥೈಸಿಕೊಳ್ಳುವ ಒಂದು ವಿಶೇಷ ಪ್ರಯತ್ನ ಇದಾಗಿತ್ತು. ಸಾಂಪ್ರದಾಯಿಕ ಪಾಠ-ಪ್ರವಚನ ಮತ್ತು ಪರೀಕ್ಷಾ ಪದ್ಧತಿಗಿಂತ ವಿಭಿನ್ನವಾಗಿ ಆಲೋಚಿಸುವ ಪ್ರಯತ್ನ ಇದಾಗಿತ್ತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ವತ್ ಪಿಯು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಗಂಗಾಧರ ಈ. ಮಂಡಗಳಲೆ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ರಾಮಚಂದ್ರ ಎಮ್.ಎಸ್. ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರತಾಪ್ ದೊಡ್ಡಮನೆ ಅವರು ತಮ್ಮ ಸುದೀರ್ಘ ಶೈಕ್ಷಣಿಕ ಅನುಭವದ ಆಧಾರದ ಮೇಲೆ ವಿಜ್ಞಾನದ ವಿಸ್ಮಯವನ್ನು ವ್ಯಾಖ್ಯಾನಿಸಿದರು.

ಈ ಅಪರೂಪದ ಕಾರ್ಯಾಗಾರಕ್ಕೆ 7 ಪ್ರೌಢಶಾಲಾ ಹಾಗೂ ಪಿಯು ಕಾಲೇಜಿನ 52 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಸಂವಾದ ಕಾರ್ಯಗಾರದಲ್ಲಿ ಉತ್ತಮ ಪ್ರಶ್ನೆ ಕೇಳಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನವನ್ನು ನೀಡಲಾಯಿತು. ಈ ಅರ್ಥಪೂರ್ಣ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಲಾಯಿತು.

Related posts

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಿರತೆ: ವಾಹನ ಸವಾರರಲ್ಲಿ ಆತಂಕ

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!