38.9 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

ಬೆಳ್ತಂಗಡಿ: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿಯ
ಇಬ್ಬರನ್ನು ಮಂಗಳೂರು ನಗರ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಏರ್‌ಟೆಲ್ ಕಂಪೆನಿಯ 86 ಸಿಮ್‌ಕಾರ್ಡಗಳು, 2 ಮೊಬೈಲ್ ಪೋನ್‌ಗಳು, ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.


ಬೆಳ್ತಂಗಡಿ ತಾಲೂಕಿನ ನಿವಾಸಿ ಗಳಾದ ಶಮದ್ ಮಹಮ್ಮದ್ ಸಮರ್ (26ವ) ಮತ್ತು ಮಹಮ್ಮದ್ ಅಜೀಂ (19ವ) ಬಂಧಿತರು. ಶಮದ್‌ ಮಂಗಳೂರು ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ಬಾಡಿಗೆ ಮನೆಯಲ್ಲಿದ್ದ. ಮಹಮ್ಮದ್ ಅಜೀಂ ಕೂಡ ಮಂಗಳೂರು ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದ. ಇವರು ಬೆಳ್ತಂಗಡಿಯ ಮುಸ್ತಾಫ ಮತ್ತು ಮಡಂತ್ಯಾರ್‌ನ ಸಾಜೀದ್‌ನ ಸೂಚನೆಯಂತೆ ತಮ್ಮ ಗೆಳೆಯರು, ಪರಿಚಿತರಿಗೆ, ಸ್ವಲ್ಪ ಹಣ ನೀಡಿ ಪುಸಲಾಯಿಸಿ ಅವರಿಂದ ಸಿಮ್‌ಕಾರ್ಡ್‌ಗಳನ್ನು ಪಡೆದುಕೊಳ್ಳುತ್ತಿದ್ದರು.


ಆರೋಪಿಗಳು ಕಳೆದ ಜನವರಿಯಿಂದಲೇ ಈ ದಂಧೆ ನಡೆಸುತ್ತಿದ್ದು, ಇದುವರೆಗೆ 400 ರಿಂದ 500 ಸಿಮ್ ಕಾರ್ಡ್‌ಗಳನ್ನು ಸಂಗ್ರಹಿಸಿಕೊಟ್ಟಿದ್ದಾರೆ. ತನ್ನ ಗೆಳೆಯರು, ಪರಿಚಿತರಿಗೆ 200ರಿಂದ 300 ರೂ. ನೀಡಿ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಅದನ್ನು ಮುಸ್ತಾಫ ಮತ್ತು ಸಾಜೀದ್‌ಗೆ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದುಬೈ ಹಾಗೂ ಇತರ ಕೆಲವು ದೇಶಗಳಲ್ಲಿರುವ ಸೈಬ‌ರ್ ವಂಚಕರು ಭಾರತದ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಭಾರತೀಯರಿಗೆ ಕೋಟ್ಯಂತರ ರೂಪಾಯಿ ವಂಚಿಸುತ್ತಾರೆ. ಭಾರತೀಯ ಸಿಮ್‌ಗಳಾದರೆ ಆ ಸಂಖ್ಯೆಯನ್ನು ಬಳಸಿ ಭಾರತೀಯರನ್ನು ನಂಬಿಸಿ ವಂಚಿಸುವುದು ಸುಲಭ ಎಂಬುದು ವಂಚಕರ ಲೆಕ್ಕಾಚಾರ ಧರ್ಮಸ್ಥಳ ಪೊಲೀಸರು ಕಳೆದ ಫೆಬ್ರವರಿಯಲ್ಲಿ ಐವರನ್ನು ಬಂಧಿಸಿ ಅವರಿಂದ 42 ಸಿಮ್‌ಾರ್ಡ್ಗಳನ್ನು ವಶಪಡಿಸಿಕೊಂಡಿದ್ದರು.

ಈಗ ಮಂಗಳೂರು ನಗರ ಪೊಲೀಸರು ಬಂಧಿಸಿರುವ ಆರೋಪಿಗಳಿಗೂ ಧರ್ಮಸ್ಥಳದಲ್ಲಿ ಬಂಧಿಸಲ್ಪಟ್ಟಿರುವ ಆರೋಪಿಗಳಿಗೂ ಸಂಪರ್ಕವಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ನವದುರ್ಗ ಲೇಖನ ಯಜ್ಞ ಕುರಿತು ಮಾಹಿತಿ

Suddi Udaya

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಗಣಿತ ರಿಲೇ ಸ್ಪರ್ಧೆ ಹಾಗೂ ಪ್ರತಿಭಾ ಕಾರಂಜಿಯ ಆಶುಭಾಷಣ ಹಾಗೂ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ಕುಂಭಶ್ರೀ ವಿದ್ಯಾಸಂಸ್ಥೆಗೆ ರನ್ನರ್ ಅಪ್

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ

Suddi Udaya
error: Content is protected !!