27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

86 ಸೀಮ್ ಕಾರ್ಡ್ ಸಹಿತ ಬೆಳ್ತಂಗಡಿ ಯ ಇಬ್ಬರನ್ನು ಬಂಧಿಸಿದ ಮಂಗಳೂರು ಪೊಲೀಸರು: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪ

ಬೆಳ್ತಂಗಡಿ: ವಿದೇಶ ದಲ್ಲಿರುವ ಸೈಬರ್ ವಂಚಕರಿಗಾಗಿ ಸಿಮ್‌ಕಾರ್ಡ್‌ಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಬೆಳ್ತಂಗಡಿಯ
ಇಬ್ಬರನ್ನು ಮಂಗಳೂರು ನಗರ ಸೆನ್ ಠಾಣೆಯ ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ ಏರ್‌ಟೆಲ್ ಕಂಪೆನಿಯ 86 ಸಿಮ್‌ಕಾರ್ಡಗಳು, 2 ಮೊಬೈಲ್ ಪೋನ್‌ಗಳು, ಸ್ವಿಫ್ಟ್ ಕಾರು ಸಹಿತ 5,49,300 ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.


ಬೆಳ್ತಂಗಡಿ ತಾಲೂಕಿನ ನಿವಾಸಿ ಗಳಾದ ಶಮದ್ ಮಹಮ್ಮದ್ ಸಮರ್ (26ವ) ಮತ್ತು ಮಹಮ್ಮದ್ ಅಜೀಂ (19ವ) ಬಂಧಿತರು. ಶಮದ್‌ ಮಂಗಳೂರು ನಗರದ ಕಾಲೇಜೊಂದರ ಬಿಬಿಎ ವಿದ್ಯಾರ್ಥಿಯಾಗಿದ್ದು, ಬಾಡಿಗೆ ಮನೆಯಲ್ಲಿದ್ದ. ಮಹಮ್ಮದ್ ಅಜೀಂ ಕೂಡ ಮಂಗಳೂರು ನಗರದಲ್ಲೇ ಬಾಡಿಗೆ ಮನೆಯಲ್ಲಿದ್ದ. ಇವರು ಬೆಳ್ತಂಗಡಿಯ ಮುಸ್ತಾಫ ಮತ್ತು ಮಡಂತ್ಯಾರ್‌ನ ಸಾಜೀದ್‌ನ ಸೂಚನೆಯಂತೆ ತಮ್ಮ ಗೆಳೆಯರು, ಪರಿಚಿತರಿಗೆ, ಸ್ವಲ್ಪ ಹಣ ನೀಡಿ ಪುಸಲಾಯಿಸಿ ಅವರಿಂದ ಸಿಮ್‌ಕಾರ್ಡ್‌ಗಳನ್ನು ಪಡೆದುಕೊಳ್ಳುತ್ತಿದ್ದರು.


ಆರೋಪಿಗಳು ಕಳೆದ ಜನವರಿಯಿಂದಲೇ ಈ ದಂಧೆ ನಡೆಸುತ್ತಿದ್ದು, ಇದುವರೆಗೆ 400 ರಿಂದ 500 ಸಿಮ್ ಕಾರ್ಡ್‌ಗಳನ್ನು ಸಂಗ್ರಹಿಸಿಕೊಟ್ಟಿದ್ದಾರೆ. ತನ್ನ ಗೆಳೆಯರು, ಪರಿಚಿತರಿಗೆ 200ರಿಂದ 300 ರೂ. ನೀಡಿ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಅದನ್ನು ಮುಸ್ತಾಫ ಮತ್ತು ಸಾಜೀದ್‌ಗೆ ನೀಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದುಬೈ ಹಾಗೂ ಇತರ ಕೆಲವು ದೇಶಗಳಲ್ಲಿರುವ ಸೈಬ‌ರ್ ವಂಚಕರು ಭಾರತದ ಸಿಮ್ ಕಾರ್ಡ್‌ಗಳನ್ನು ಖರೀದಿಸಿ ಭಾರತೀಯರಿಗೆ ಕೋಟ್ಯಂತರ ರೂಪಾಯಿ ವಂಚಿಸುತ್ತಾರೆ. ಭಾರತೀಯ ಸಿಮ್‌ಗಳಾದರೆ ಆ ಸಂಖ್ಯೆಯನ್ನು ಬಳಸಿ ಭಾರತೀಯರನ್ನು ನಂಬಿಸಿ ವಂಚಿಸುವುದು ಸುಲಭ ಎಂಬುದು ವಂಚಕರ ಲೆಕ್ಕಾಚಾರ ಧರ್ಮಸ್ಥಳ ಪೊಲೀಸರು ಕಳೆದ ಫೆಬ್ರವರಿಯಲ್ಲಿ ಐವರನ್ನು ಬಂಧಿಸಿ ಅವರಿಂದ 42 ಸಿಮ್‌ಾರ್ಡ್ಗಳನ್ನು ವಶಪಡಿಸಿಕೊಂಡಿದ್ದರು.

ಈಗ ಮಂಗಳೂರು ನಗರ ಪೊಲೀಸರು ಬಂಧಿಸಿರುವ ಆರೋಪಿಗಳಿಗೂ ಧರ್ಮಸ್ಥಳದಲ್ಲಿ ಬಂಧಿಸಲ್ಪಟ್ಟಿರುವ ಆರೋಪಿಗಳಿಗೂ ಸಂಪರ್ಕವಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Related posts

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya

ಎಸ್. ಡಿ. ಯಂ. ಇಂಜಿನಿಯರಿಂಗ್ ಕಾಲೇಜಿಗೆ ವಿ.ಟಿ.ಯು ರ್‍ಯಾಂಕ್ ಹಾಗೂ ಶೇ. 100 ಫಲಿತಾಂಶ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಾರ್ಷಿಕೋತ್ಸವ 2024-25

Suddi Udaya

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಮಾಲಾಡಿ: ಜ್ವರದಿಂದ ಬಳಲಿ ಯುವಕ ಮೃತ್ಯು

Suddi Udaya
error: Content is protected !!