23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಮುಂಭಾಗದಲ್ಲಿ ಧ್ವಜಾರೋಹಣ

ವೀರ ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಎದುರು ಧ್ವಜಾರೋಹಣ ನಡೆಸುವುದರ ಮೂಲಕ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ನೆರವೇರಿಸಿದರು.
ಮುಖ್ಯ ಅತಿಥಿಗಳಾಗಿ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಯೋಗಿಶ್ ಶೆಟ್ಟಿ, ಡಿ.ಬಿ. ಬಾಲಕೃಷ್ಣ, ಪೂರ್ಣಿಮಾ ಕೆ.ಎಂ, ಸುಂದರ್ ಗೌಡ, ಕೇಶವ ಗೌಡ, ಗರುದೇವ ಯು.ಬಿ, ಡಾ. ಸಚಿನ್ ನಡ್ಕ, ಕುಸುಮಾಧರ, ಸಾರಿಕಾ ಸುರೇಶ್, ನವೀನ್ ಚಿಲ್ಪಾರ್, ರಾಮಚಂದ್ರ ಕೆ, ವಾಸುದೇವ ವಕೀಲರು ಪಾಲ್ಗೊಂಡಿದ್ದರು.

ಒಕ್ಕಲಿಗರ ಗೌಡ ಸೇವಾ ಸಂಘದ ಪದಾಧಿಕಾರಿಗಳು, ನಿರ್ದೇಶಕರು, ಮಹಿಳಾ ಘಟಕದ ಹಾಗೂ ಯುವ ಘಟಕದ ಪದಾಧಿಕಾರಿಗಳು, ನಿರ್ದೇಶಕರು ಮತ್ತು ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನ ಸಮಿತಿ ಪದಾಧಿಕಾರಿಗಳು, ನಿರ್ದೇಶಕರು ಭಾಗವಹಿಸಿದ್ದರು.

ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಸ್ಥಾಪನಾ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಪುತ್ತಿಲ ಸ್ವಾಗತಿಸಿದರು. ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು ಪ್ರಸ್ತಾವಿಕವಾಗಿ ಮಾತನಾಡಿದರು. ಕಿರಣ್ ಹೊಸಳಿಕೆ ಧನ್ಯವಾದ ಸಲ್ಲಿಸಿದರು. ಮೋನಪ್ಪ ಗೌಡ ಧ್ವಜಾರೋಹಣ ಕಾರ್ಯಕ್ರಮ ನಿರ್ವಹಿಸಿದರು. ಕು| ದಕ್ಷಾ ಸಾಂತಪ್ಪ ಪ್ರಾರ್ಥಿಸಿದರು, ಇಂದ್ರಾವತಿಯವರು ಕಾರ್ಯಕ್ರಮ ನಿರೂಪಿಸಿದರು.

Related posts

ನಿಡ್ಲೆ ಗ್ರಾ.ಪಂ. ಅಧ್ಯಕ್ಷರಾಗಿ ಶ್ಯಾಮಲ, ಉಪಾಧ್ಯಕ್ಷರಾಗಿ ರುಕ್ಮಯ್ಯ ಪೂಜಾರಿ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ

Suddi Udaya

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸರಕಾರಿ ಪ.ಪೂ. ಕಾಲೇಜು ಹಾಗೂ ಸರಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!