25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿಶಾಲಾ ಕಾಲೇಜು

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

ನಡ: ನಮ್ಮ ಪೂರ್ವಜರಿಗೆ ಆಟಿ ತಿಂಗಳ ಬದುಕು ಆರ್ಥಿಕವಾಗಿ ಬಹಳ ಸಂಕಷ್ಟದ ಬದುಕು. ರೋಗ ರುಜಿನಗಳು ಕಾಡುವ ಕಾಲ. ಇಡೀ ವರ್ಷದಲ್ಲಿ ಬರುವ ಕಾಯಿಲೆ ಕಸಾಲೆಗಳನ್ನು ಪರಿಹರಿಸುವ ಶಕ್ತಿ ಸತ್ವವನ್ನು ಅವರು ಪಾಲೆಕೆತ್ತೆಯಲ್ಲಿ ಗುರುತಿಸಿ ಬಳಸಿ ನಿರೋಗಿಗಳಾದರು. ಇದು ಮೂಢನಂಬಿಕೆ ಅಲ್ಲ. ಮೂಲ ನಂಬಿಕೆ” ಎಂದು ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ತಿಳಿಸಿದರು.

ಅವರು ಸರಕಾರಿ ಪದವಿ ಪೂರ್ವ ಕಾಲೇಜಿನ ಆಟಿಡೊಂಜಿ ಕೂಟ ಕಾರ್ಯಕ್ರಮದ ಉದ್ಘಾಟನೆಯನ್ನು ಭತ್ತದ ಕಳಸೆಯಲ್ಲಿ ತೆಂಗಿನ ಸಿರಿಯನ್ನು ಅರಳಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ವಹಿಸಿ “ಹಳೇ ಕಾಲದ ಸಂಪ್ರದಾಯಗಳಲ್ಲಿ ಸತ್ವವೂ ಇದೆ. ವೈಜ್ಞಾನಿಕತೆಯೂ ಇದೆ. ಇದನ್ನು ಮುಂದುವರೆಸಿಕೊಂಡು ಹೋಗುವುದರಲ್ಲಿ ನಮ್ಮ ಬದುಕಿನ ಸಾರ್ಥಕತೆ ಇದೆ” ಎಂದು ಕರೆ ನೀಡಿದರು.

ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮಂಜುಳಾ, ಕೊಯ್ಯೂರು ಸ.ಪ.ಪೂ.ಕಾಲೇಜಿನ ಪ್ರಭಾರ ಪ್ರಾಂಶುಪಾಲ ಮೋಹನ್ ಗೌಡ, ಹಿರಿಯ ಉಪನ್ಯಾಸಕಿ ಶ್ರೀಮತಿ ಲಿಲ್ಲಿ ಪಿ.ವಿ., ಕಾಲೇಜು ನಾಯಕ ರಕ್ಷಿತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶ್ರೀಮತಿ ಸುಕೇತ ಸ್ವಾಗತಿಸಿ, ಶ್ರೀಮತಿ ಪವಿತ್ರ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಚೇತನಿ ವಂದಿಸಿದರು.

ಈ ಸಂದರ್ಭದಲ್ಲಿ ಯದುಪತಿ ಗೌಡ ರವರನ್ನು ಸನ್ಮಾನಿಸಲಾಯಿತು. ಸನ್ಮಾನಿತರ ಪರಿಚಯವನ್ನು ಶ್ರೀಮತಿ ವಸಂತಿ ಪಿ. ನಿರ್ವಹಿಸಿದರು.

Related posts

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಮಹಿಳಾ ಜೆಸಿ ವಿಭಾಗದಿಂದ ಧ್ವನಿವರ್ಧಕ ಕೊಡುಗೆ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಬಳಂಜ ಸ.ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!