24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗವು ಜಂಟಿಯಾಗಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಸಂಸ್ಥೆಯ ಪ್ರಾಂಶುಪಾಲ ಡಾ. ಸರೋಜಿನಿ ಆಚಾರ್ ಧ್ವಜಾರೋಹಣಗೈದು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿ ಮಾದಕವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಕರೆಕೊಟ್ಟರು.

ಎನ್‌ಸಿಸಿ ವಿದ್ಯಾರ್ಥಿಗಳು ಆಕರ್ಷಕ ಪಥ ಸಂಚಲನ ನಡೆಸಿ ಅತಿಥಿ ಅಭ್ಯಾಗತರಿಗೆ ಗೌರವ ವಂದನೆ ಸಲ್ಲಿಸಿದರು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು, ಸಂಸ್ಥೆಯ ಉಪನ್ಯಾಸಕರು, ಶಿಕ್ಷಕರು, ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸಂಸ್ಥೆಯ ಎನ್‌ಸಿಸಿ ಅಧಿಕಾರಿ ನಿರಂಜನ್ ಜೈನ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಸಂಸ್ಥೆಯ ಉಪಪ್ರಾಂಶುಪಾಲ ಉದಯ ಕುಮಾರ್ ಜೈನ್ ವಂದಿಸಿದರು.

Related posts

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

Suddi Udaya

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!