September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ 2024-25 ನೇ ಶೈಕ್ಷಣಿಕ ವರ್ಷದ ಪ್ರಥಮ, ಶಿಕ್ಷಕ-ರಕ್ಷಕ ಸಭೆಯು ಕಾಲೇಜು ಸಭಾಂಗಣದಲ್ಲಿ ಜರುಗಿತು.

ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಓಮನ ರವರು ಪ್ರಸ್ತಾವನೆಯನ್ನು ಮಂಡಿಸಿ ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳನ್ನು ಮತ್ತು ಸದಸ್ಯರು ಆಯ್ಕೆ ಮಾಡಿದರು.ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಯ ಹಿತದೃಷ್ಟಿಯಿಂದ ಪೋಷಕರಿಗಿದ್ದ ಎಲ್ಲಾ ಸಂದೇಹಗಳಿಗೆ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕ, ಸಂಸ್ಥೆಯ ಕಾರ್ಯನಿರ್ವಾಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ರವರು ಸಮಾಧಾನಕರವಾದ ರೀತಿಯಲ್ಲಿ ಸಮಾಲೋಚನೆಯನ್ನು ನಡೆಸಿದರು. ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸುರೇಶ್ ಪೂಜಾರಿ ಸಂಸ್ಥೆಯ ಪರಿಶ್ರಮವನ್ನು ಶ್ಲಾಘಿಸಿ ಶುಭವನ್ನು ಹಾರೈಸಿದರು. ಉಪಾಧ್ಯಕ್ಷ ರಾಗಿ ಮಹಾಂತೇಶ್ ವಾಲಿಕರ್ ಮತ್ತು ಸತೀಶ್ ಪೂಜಾರಿ,
ಕೋಶಾಧಿಕಾರಿಯಾಗಿ ಅಶ್ವಥ್ ನಾರಾಯಣ, ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಉಪನ್ಯಾಸಕರ ಮತ್ತು ಹೆತ್ತವರ ಜವಾಬ್ದಾರಿಯನ್ನು ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ ಎಚ್ ರವರು ಮನೋಜ್ಞವಾಗಿ ಸಭಾಸದರಿಗೆ ತಲುಪಿಸಿದರು. ಈ ಕಾರ್ಯಕ್ರಮವನ್ನು ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಸುವರ್ಣ ಲತಾ ನಿರೂಪಿಸಿ, ಕುಮಾರಿ ಸುಶ್ಮಿತಾ ರಸಾಯನಶಾಸ್ತ್ರ ಉಪನ್ಯಾಸಕಿ ಸ್ವಾಗತಿಸಿದರು. ವಿನಯ್ ಎಂ ಎಸ್ ಗಣಕಶಾಸ್ತ್ರ ಉಪನ್ಯಾಸಕರು ವಂದಿಸಿದರು.

Related posts

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಸಭಾಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ಗುರುವಾಯನಕೆರೆಯ ‘ಕೆರೆ’ ಗೆ ಲೋಕಾಯುಕ್ತ ನ್ಯಾಯಾಮೂರ್ತಿ ಭೇಟಿ, ಪರಿಶೀಲನೆ

Suddi Udaya

ವೇಣೂರು ಪೆರ್ಮುಡ ಸೂರ್ಯ-ಚಂದ್ರ ಜೋಡುಕೆರೆ ಬಯಲು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!