25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಮಹತ್ತರ ಪಾತ್ರವಹಿಸಿದ್ದು ಅದು ಅಪಾರ ಕೊಡುಗೆ ನೀಡಿದೆ..
ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ ಕೊಡುಗೆ ಶೂನ್ಯ. ಭಾರತವನ್ನು ರಕ್ಷಣೆ ಮಾಡುವ ಬದಲು ಮಾರಾಟ ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ಕಮಲ ಮುಖಂಡರು ನಕಲಿ ದೇಶ ಭಕ್ತರು. ಧರ್ಮ, ಜಾತಿಗಳ ನಡುವೆ ಜಗಳ ಹಚ್ಚಿ, ವಿಷ ಬೀಜ ಬಿತ್ತುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿ ಆವರಣದಲ್ಲಿ, 78ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ನಡೆದ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಡಾ.ಬಾಬಾಸಾಹೇಬ್ ಅಂಬೇಡ್ಕರ್‌ ಅವರು ತುಳಿತಕ್ಕೊಳಗಾದ ಜನರಿಗೆ ಸಂವಿಧಾನದ ಮೂಲಕ ನ್ಯಾಯವನ್ನು ಒದಗಿಸಿದ್ದಾರೆ. ಸರ್ಕಾರಿ ಸೌಲಭ್ಯ ಪಡೆದುಕೊಂಡು ಎಲ್ಲರೂ ಶಿಕ್ಷಣ ಪಡೆದುಕೊಂಡು ಮುಖ್ಯವಾಹಿನಿಗೆ ಬರಬೇಕು. ಶಿಕ್ಷಣದಿಂದ ಮಾತ್ರ ಪ್ರಗತಿ ಸಾಧ್ಯವಿದೆ. ಹೀಗಾಗಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಶಿಕ್ಷಣ, ಸಂಘಟನೆ ಹಾಗೂ ಹೋರಾಟದ ಮೂಲಕ ಜನರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರ ಸಂಕಷ್ಟದ ಸಂದರ್ಭದಲ್ಲಿ ಸಹಾಯ ನೀಡಲು ಪ್ರಾರಂಭಿಸಿದ ಇಂದಿರಾ ಸಹಾಯ ಹಸ್ತವನ್ನು ಮೇಲತಂಬೆಟ್ಟು ಗ್ರಾಮದ ವಸಂತ ರವರಿಗೆ ಹಸ್ತಾಂತರಿಸಲಾಯಿತು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಸೇವಾದಳದ ಅಧ್ಯಕ್ಷ ಪ್ರದೀಪ್ ಕೆ.ಸಿ,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ ಕುಮಾರ್ , ಪಕ್ಷದ ಮುಖಂಡರಾದ ಶ್ರೀಮತಿ ಲೋಕೆಶ್ವರಿ ವಿನಯಚಂದ್ರ ಗೌಡ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ,ನಮಿತಾ ಪೂಜಾರಿ ,ಗ್ಯಾರಂಟಿ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಮಾಲಾಡಿ,ತಾಲೂಕು ಕೆಡಿಪಿ ಸದಸ್ಯರಾದ ಇಸ್ಮಾಯಿಲ್ ಪೆರಿಂಜೆ ಅಕ್ರಮ ಸಕ್ರಮ ಸಮಿತಿಯ ಶ್ರೀಮತಿ ವಿನುತಾ ರಜತ್ ಗೌಡ ,ಪಟ್ಟಣ ಪಂಚಾಯತ್ ನಾಮನಿರ್ದೇಶಿತ ಸದಸ್ಯ ಅಬ್ದುಲ್‌ ಬಶೀರ್ ,ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ವಿನ್ಸೆಂಟ್ ಡಿಸೋಜಾ ,ಜಯಶೀಲ ಗೌಡ ,ಡಿಸಿಸಿ ಸದಸ್ಯರಾದ ಶ್ರೀಮತಿ ಶೋಭ ನಾರಾಯಣ ಗೌಡ,ಹಾಗೂ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ,ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬೆಳ್ತಂಗಡಿಯ ಶ್ರೇಯಸ್ ಕುಮಿಟೆಯಲ್ಲಿ ಪ್ರಥಮ ಸ್ಥಾನ

Suddi Udaya

ಕಡಿರುದ್ಯಾವರ ಶ್ರೀ ವನದುರ್ಗಾದೇವಿ ದೇವಸ್ಥಾನ ಟ್ರಸ್ಟ್ ವತಿಯಿಂದ ಎಕ್ಸೆಲ್ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಇವರಿಗೆ ಅಭಿನಂದನೆ

Suddi Udaya

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಹೋಗುವ ಹಾಗೂ ಬರುವ ಎಲ್ಲಾ ಸರ್ಕಾರಿ ಬಸ್ಸುಗಳು ಸೌತಡ್ಕ ಮಾರ್ಗವಾಗಿ ಚಲಿಸಲು: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯಿಂದ ಪುತ್ತೂರು ಕ.ರಾ.ರ.ಸಾ.ನಿಗಮದ ನಿಯಂತ್ರಣಾಧಿಕಾರಿಯವರಿಗೆ ಮನವಿ

Suddi Udaya
error: Content is protected !!