25.7 C
ಪುತ್ತೂರು, ಬೆಳ್ತಂಗಡಿ
March 7, 2026
ಶಾಲಾ ಕಾಲೇಜು

ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿ 78 ನೇ ವರ್ಷದ ಸ್ವಾತಂತ್ರೋತ್ಸವ

ಬೆಳ್ತಂಗಡಿ :ಆ 15.ನಾವು ಸಂಭ್ರಮದಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ ಎಂದರೆ ಇದರ ಹಿಂದೆ ಸಾಕಷ್ಟು ಜನರ ಬಲಿದಾನವಿದೆ ಎಂಬುದನ್ನು ಮರೆಯುವಂತಿಲ್ಲ. ನಮ್ಮ ರಾಷ್ಟ್ರವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ದೇಶವಾಗಿದೆ. ಭಾರತದಲ್ಲಿ ಸಂಸ್ಕೃತಿ, ಭಾಷೆ ಹಾಗೂ ಧರ್ಮದಲ್ಲಿ ಸಾಕಷ್ಟು ವೈವಿಧ್ಯತೆಯನ್ನು ಕಾಣಬಹುದಾಗಿದೆ. ಆದರೂ ಕೂಡ ನಾವೆಲ್ಲ ಒಂದಾಗಿ ಏಕತೆಯಿಂದ ಭವ್ಯ ಭಾರತದಲ್ಲಿ ಬಾಳುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ.
ಭಾರತ ಮಾತೆಯ ಮಕ್ಕಳಾದ ನಾವೆಲ್ಲ ಎಂದಿಗೂ ಪರಸ್ಪರರ ಧರ್ಮ, ಭಾಷೆ ಹಾಗೂ ಸಂಸ್ಕೃತಿಯನ್ನು ಗೌರವಿಸುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು. ಸಾಮರಸ್ಯದಿಂದ ಬಾಳಿದರೆ ಮಾತ್ರ ನಾವು ಶತ್ರುಗಳನ್ನು ಸೆದೆಬಡಿಯಲು ಸಾಧ್ಯವಿದೆ. ಅಲ್ಲದೇ ನಮ್ಮ ಪೂರ್ವಜರು ನಮಗೆ ಸ್ವಾತಂತ್ರ್ಯವನ್ನು ತಂದುಕೊಟ್ಟಿರುವುದು ಇಂದು ನಾವು ಧರ್ಮಕ್ಕಾಗಿ , ಭಾಷೆಗಾಗಿ ಹೋರಾಡಲಿ ಎಂದಲ್ಲ. ಬದಲಾಗಿ ಭಾರತದಲ್ಲಿ ಒಗ್ಗಟ್ಟಿನಿಂದ ಬಾಳಲಿ ಎಂದಾಗಿದೆ. ಹೀಗಾಗಿ ನಾವು ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಕನಸಿನ ಭಾರತ ನಿರ್ಮಿಸಲು ಒಂದಾಗಬೇಕಿದೆ. ಸ್ವಾತಂತ್ರ್ಯ ದಿನವಾದ ಇಂದು ನಾವು ದೇಶದಲ್ಲಿ ಏಕತೆ, ಶಾಂತಿ ಹಾಗೂ ಅಭಿವೃದ್ಧಿಯನ್ನು ಸಾಧಿಸಲು ಒಂದಾಗಿ ಪ್ರತಿಜ್ಞೆ ತೊಡೋಣ ಎಂದು ಜಿಲ್ಲಾ ಕೆ ಡಿ ಪಿ ಸದಸ್ಯ ನೋಟರಿ ನ್ಯಾಯವಾದಿ ಸಂತೋಷ್ ಕುಮಾರ್ ಲೈಲಾ ನುಡಿದರು. ಅವರು ಇಂದು ಸಂತ ತೆರೇಸಾ ಪ್ರೌಢ ಶಾಲೆ ಬೆಳ್ತಂಗಡಿ ಇಲ್ಲಿ 78 ನೇ ವರ್ಷದ ಸ್ವಾತಂತ್ರೋಸ್ಥವದ ಧ್ವಜಾರೋಹಣ ಮಾಡಿ ಮಕ್ಕಳಿಗೆ ಸಂದೇಶ ಸಾರಿದರು.
ಈ ಸಂದರ್ಬದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೀನಾ, ಪಿಯೂಸಿ ಕಾಲೇಜಿನ ಪ್ರಾಚಾರ್ಯರಾದ ಸಿಸ್ಟೆರ್ , ಪಿಟಿಎ ಉಪಾದ್ಯಕ್ಷರಾದ ಜಗನ್ನಾಥ ಪುತ್ರಬೈಲು, ಹಳೆ ವಿದ್ಯಾರ್ಥಿ ಸಂಘದ ಉಪಾದ್ಯಕ್ಷರಾದ ನಾರಾಯಣ ಶೆಟ್ಟಿ ಉಪಸ್ಥರಿದ್ದರು.

Related posts

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಾರ್ಷಿಕ ಕ್ರೀಡಾಕೂಟ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲಾ ಬೆಳ್ಳಿಹಬ್ಬ ಸಂಭ್ರಮಕ್ಕೆ ಚಾಲನೆ, ಲೋಗೋ ಬಿಡುಗಡೆ

Suddi Udaya

ರುಪ್ಸಾ ನೀಡುವ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಾಣಿ ಆಂ.ಮಾ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ. ಆಯ್ಕೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya
error: Content is protected !!