25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ರಾಷ್ಟ್ರಪ್ರೇಮದೊಂದಿಗೆ ಗುಣಾತ್ಮಕವಾದ ವಿಚಾರಗಳನ್ನು ಬೆಳೆಸಿಕೊಂಡು ಏಳಿಗೆಯನ್ನು ಹೊಂದುವುದು ಪ್ರತಿಯೊಬ್ಬರ ಧ್ಯೇಯವಾಗಬೇಕು ಎಂದು ಬೆಳ್ತಂಗಡಿ ವಾಣಿ ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಪ್ರಜ್ವಲಾ ಡಿ ಆರ್ ಹೇಳಿದರು.


ಅವರು ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಸ್ವತಂತ್ರ ಭಾರತದಲ್ಲಿ ನಾವು ನೆಮ್ಮದಿಯನ್ನು ಕಾಣಬೇಕಾದರೆ ಜನರನ್ನು ದಾರಿ ತಪ್ಪಿಸುವ ವಿಚಾರಗಳಿಂದ ದೂರ ಇರಬೇಕು. ಯುವ ಜನಾಂಗ ಆಧುನಿಕ ಎಲೆಕ್ಟ್ರಾನಿಕ್ ಮಾಧ್ಯಮಗಳನ್ನು ದುರುಪಯೋಗ ಪಡಿಸಿಕೊಳ್ಳದೆ ಜ್ಞಾನವನ್ನು ಹೊಂದುವಲ್ಲಿ ಬಳಸಿಕೊಳ್ಳಬೇಕು. ಯುವ ಪ್ರತಿಭೆಗಳು‌ ರಾಷ್ಟ್ರ ಅಭಿವೃದ್ಧಿಯ ಕನಸುಗಳನ್ನು ಕಾಣಬೇಕು. ಪ್ರತಿಭೆಗಳು ವಿದೇಶದ ಪಾಲಾಗದಂತೆ ನೋಡಿಕೊಳ್ಳಬೇಕು. ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಂಡು ನಡೆದಾಗ ಮಾತ್ರ ಸ್ವಾತಂತ್ರ ದಿನಾಚರಣೆಗೆ ಅರ್ಥ ಬರುತ್ತದೆ ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಆಡಳಿತಾಧಿಕಾರಿ ಪ್ರಸಾದ್ ಕುಮಾರ್ ಉಪಸ್ಥಿತರಿದ್ದರು.
ಉಪ ಪ್ರಾಂಶುಪಾಲರಾದ ವಿಷ್ಣು ಪ್ರಕಾಶ್ ಸ್ವಾಗತಿಸಿದರು. ಉಪನ್ಯಾಸಕ ಮಹಾಬಲ ಗೌಡ ಧನ್ಯವಾದವಿತ್ತರು. ಉಪನ್ಯಾಸಕಿ ಲತಾಶ್ರೀ ಕಾರ್ಯಕ್ರಮ ನಿರೂಪಿಸಿದರು.

Related posts

ಇಂದಬೆಟ್ಟು ಸ.ಹಿ. ಪ್ರಾ. ಶಾಲೆಯ ಎಸ್‌ಡಿಎಂಸಿ ಸಮಿತಿ ರಚನೆ

Suddi Udaya

ಬೆಳಾಲು ಶ್ರೀ ಧ.ಮಂ.ಅ. ಪ್ರೌಢ ಶಾಲೆಯಲ್ಲಿ “ಪರೀಕ್ಷಾ ಸಿದ್ಧತೆ ಕಾರ್ಯಾಗಾರ”

Suddi Udaya

ನಾರಾವಿಯಲ್ಲಿ ದೇವೇಂದ್ರ ಹೆಗ್ಡೆ ಕೊಕ್ರಾಡಿ ಮಾಲಕತ್ವದ ಉಮಾಮಹೇಶ್ವರ ಪೆಟ್ರೋಲ್ ಪಂಪ್ ಶುಭಾರಂಭ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya
error: Content is protected !!