28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೀರಾ ಹದಗೆಟ್ಟ ಇಂದಬೆಟ್ಟು ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆ: ಗ್ರಾ.ಪಂ. ಮಾಜಿಸದಸ್ಯ, ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೊಟ್ಯಾನ್ ರಿಂದ ವಿಶಿಷ್ಟವಾಗಿ ಹೋರಾಟ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

ಇಂದಬೆಟ್ಟು: ಇಲ್ಲಿಯ ಇತಿಹಾಸ ಪ್ರಸಿದ್ಧ ಶ್ರೀ ಅರ್ಧನಾರೀಶ್ವರಿ ದೇವಸ್ಥಾನದ ರಸ್ತೆ ತೀರಾ ಹದಗೆಟ್ಟಿದೆ. ಇದರಿಂದಾಗಿ ಬೆಸೆತ್ತ ಮಾಜಿ ಗ್ರಾಮ ಪಂಚಾಯತ್ ಸದಸ್ಯ, ಸಾಮಾಜಿಕ ಹೋರಾಟಗಾರ ವಿಶಿಷ್ಟವಾಗಿ ತನ್ನ ಆಕ್ರೋಶ ವ್ಯಕ್ತಪಡಿಸಿ ಬ್ಯಾನರ್ ಅಳವಡಿಸಿದ್ದು , ಈ ಬ್ಯಾನರ್ ಸಾಕಷ್ಟು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಚರ್ಚೆಗೆ ಗ್ರಾಸವಾಗಿದೆ.

ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಶ್ರೀ ಅರ್ಧನಾರೀಶ್ವರಿ ದೇವಸ್ಥಾನ ಅತ್ಯಂತ ಪುರಾತನವಾಗಿದ್ದು , ಇತಿಹಾಸ ಪ್ರಸಿದ್ಧವಾಗಿದೆ. ದಿನನಿತ್ಯ ನೂರಾರು ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಇಲ್ಲಿ ಭಕ್ತರು ಕಾಲ್ನಡಿಗೆ , ವಾಹನಗಳಲ್ಲಿ ಸಂಚರಿಸಲು ಅಸಾಧ್ಯವಾದ ಸ್ಥಿತಿಯಲ್ಲಿ ರಸ್ತೆ ಅವ್ಯವಸ್ಥೆಯಾಗಿದೆ. ಈ ಬಗ್ಗೆ ಶಾಸಕರು ಸೇರಿದಂತೆ ಜನಪ್ರತಿನಿಧಿಗಳಿಗೆ ,ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇಂದಬೆಟ್ಟು ಗ್ರಾಮಸಭೆಯಲ್ಲೂ ಈ ಬಗ್ಗೆ ವ್ಯಾಪಕ ಚರ್ಚೆಯಾಗಿದೆ , ಆದರೂ ಪರಿಹಾರ ಶೂನ್ಯವಾಗಿದೆ.

ಇದರಿಂದ ಬೆಸೆತ್ತ ಮಾಜಿ ಗ್ರಾಮ ಪಂಚಾಯತ್ ಸದಸ್ಯ , ಸಾಮಾಜಿಕ ಹೋರಾಟಗಾರ ವೆಂಕಪ್ಪ ಕೋಟ್ಯಾನ್ ರವರು ದೇವಸ್ಥಾನಕ್ಕೆ ತೆರಳುವ ರಸ್ತೆ ಬದಿಯಲ್ಲಿ ” ಶ್ರೀ ಅರ್ಧನಾರೀಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆಯ ಕಾಮಗಾರಿ ಮಾಡಲು ತಮ್ಮಿಂದ 1 ರೂಪಾಯಿ ಸಹಾಯಧನ ನೀಡಬೇಕಾಗಿ ವಿನಂಬ್ರ ವಿನಂತಿ ” ಎಂದು ಕೈ ಬರಹದ ಬ್ಯಾನರ್ ಅಳವಡಿಸಿದ್ದು , ಅದರ ಕೆಳಗೆ ಬಕೆಟ್ ನ್ನು ಇಟ್ಟು ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬ್ಯಾನರ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದು , ಚರ್ಚೆಗೂ ಗ್ರಾಸವಾಗಿದೆ‌.

Related posts

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಆ.30: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಮಾಲಾಡಿ ನಿವಾಸಿ ಅಮ್ಟಾಡಿ ಗ್ರಾಮ ಪಂಚಾಯತ್‌ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ನಾಪತ್ತೆ ಸಹೋದರನಿಂದ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!