30.7 C
ಪುತ್ತೂರು, ಬೆಳ್ತಂಗಡಿ
May 17, 2025
ಪ್ರಮುಖ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸರ್ಕಾರಿ ಇಲಾಖಾ ಸುದ್ದಿ

ಸರಕಾರಿ ಪ್ರೌಢಶಾಲೆ ಮಚ್ಚಿನ 78ನೇ ಸ್ವಾತಂತ್ರ್ಯ ದಿನಾಚರಣೆ

ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಇಂದು 78ನೇ ಸ್ವಾತಂತ್ರ್ಯ ದಿನಾಚರಣೇಯ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ನಡೆಯಿತು ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್‌ಡಿಎಂಸಿ ಕಾರ್ಯಾಧ್ಯಕ್ಷರಾದ ಹೊನ್ನಪ್ಪ ಕುಲಾಲ್ ನೆರವೇರಿಸಿದರು ಇವತ್ತಿನ ಕಾರ್ಯಕ್ರಮದಲ್ಲಿ 2023-24ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿ ಗಳಿಸಿದ 15 ವಿದ್ಯಾರ್ಥಿಗಳಿಗೆ ಶಾಲೆಯ ವತಿಯಿಂದ ಸನ್ಮಾನಿಸಲಾಯಿತು ಹಾಗೂ ಈ ಕಾರ್ಯಕ್ರಮದಲ್ಲಿ ಪಾರಂಕಿ ದೇವಸ್ಥಾನದ ಅರ್ಚಕರಾದ ಶ್ರೀಯುತ ಶ್ರೀಧರ್ ಭಟ್ ಇವರು ಪ್ರತಿವರ್ಷದಂತೆ ಈ ವರ್ಷವೂ ಸಹ ಅತ್ಯುನ್ನತ ಶ್ರೇಣಿ ಗಳಿಸಿದ 15 ವಿದ್ಯಾರ್ಥಿಗಳಿಗೆ ಪ್ರತಿ ವಿದ್ಯಾರ್ಥಿಗೂ 2,000 ರೂಪಾಯಿ ಧನ ಸಹಾಯ ನೀಡಿ ಪ್ರೋತ್ಸಾಹದ ಮಾತುಗಳನ್ನಾಡಿದರು ಇವರಿಗೆ ಮುಖ್ಯೋಪಾಧ್ಯಾಯರು, ಶಿಕ್ಷಕವೃಂದ,ವಿದ್ಯಾರ್ಥಿಗಳು, ಪೋಷಕರು,ಶಾಲಾ ಅಭಿವೃದ್ಧಿ ಸಮಿತಿಯ ವತಿಯಿಂದ ಅನಂತ ಅನಂತ ಧನ್ಯವಾದಗಳು ಕಾರ್ಯಕ್ರಮದಲ್ಲಿ SDMC ಕಾರ್ಯಾಧ್ಯಕ್ಷರು,ಶಿಕ್ಷಕವೃಂದ ಹಿರಿಯ ವಿದ್ಯಾರ್ಥಿಗಳು,ಪೋಷಕ ಬಂಧುಗಳು ಭಾಗವಹಿಸಿದ್ದರು. ಈವತ್ತಿನ ಈ ಕಾರ್ಯಕ್ರಮವನ್ನು ನಮ್ಮ ಸಂಸ್ಥೆಯ ದೈಹಿಕ ಶಿಕ್ಷಕರಾದ ಶ್ರೀಯುತ ಸುಭಾಷ್ ಚಂದ್ರ ಪಿ ಪೂಜಾರಿ ಮತ್ತು ವಿಜ್ಞಾನ ಶಿಕ್ಷಕರಾದ ಶ್ರೀಯುತ ದುರ್ಗಾ ಪ್ರಸಾದ್ ಜಿ ಇವರು ನಿರ್ವಹಿಸಿದರು ಸಮಾಜ ವಿಜ್ಞಾನ ಶಿಕ್ಷಕರಾದ ವೆಂಕಪ್ಪ ಬಿ ಇವರು ಅಭಿನಂದಿಸಿದರು.

Related posts

ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಉಜಿರೆಯ ಆದಿತ್ಯ ಕೃಷ್ಣ ಕಾರಂತ್ ಆಯ್ಕೆ

Suddi Udaya

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!